ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ
Distribution of Laptops to Village Administrative Officers
ಕಂಪ್ಲಿ 02: ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬಿಡುಗಡೆಯಾದ ಲ್ಯಾಪ್ ಟಾಪ್‌ಗಳನ್ನು ಶಾಸಕ ಜೆ.ಎನ್.ಗಣೇಶ ಇವರು ಬುಧವಾರ ವಿತರಿಸಿದರು.
ನಂತರ ಶಾಸಕ ಗಣೇಶ ಅವರು ಮಾತನಾಡಿ, ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಕರಿ ಹೆಚ್ಚಿಸುವ ಮತ್ತು ಅವರು ಡಾಟಾ ಎಂಟ್ರಿ ಮಾಡಲು ಅನುಕೂಲದ ಹಿತದೃಷ್ಟಿಯಿಂದ ಲ್ಯಾಪ್‌ಟಾಪ್‌ಗಳನ್ನು ನೀಡಿದೆ. ಈ ಯೋಜನೆಯ ಸದುಪಯೋಗದೊಂದಿಗೆ ಜನರ ಸೇವೆಯನ್ನು ಅತಿ ವೇಗದಲ್ಲಿ ಮಾಡಲು ಮುಂದಾಗಬೇಕು ಎಂದರು. ಇಲ್ಲಿನ 13 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್‌ಬಾಷಾ, ಸಿ.ಆರ್.ಹನುಮಂತ, ತಹಶೀಲ್ದಾರ್ ಮಂಜುನಾಥ ನಾಯಕ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಆರ್‌ಐ ಜಗದೀಶ್, ಶಿರಸ್ತೇದಾರ ರಮೇಶ ಸೇರಿದಂತೆ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 