ಗೃಹಬಂಧನ, ಐಸೋಲೇಶನ್ ವಾರ್ಡ್ ನಲ್ಲಿರುವವರಿಗೆ ಫರ್ಫೆಕ್ಟ್ ಕಿಟ್ ವಿತರಣೆ
ಬಳ್ಳಾರಿ,ಏ.08: ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಟಾಸ್ಕ್ಫೋಸರ್್ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿತು.
ಕೋವಿಡ್-19 ಹಿನ್ನೆಲೆಯಲ್ಲಿ ಇದುವರೆಗೆ ಕೈಗೊಳ್ಳಲಾದ ಕ್ರಮಗಳ ಕುರಿತು ಅಗತ್ಯ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಶಸ್ತ್ರಚಿಕಿತ್ಸಕ, ವಿಮ್ಸ್ ನಿದರ್ೇಶಕರಿಂದ ಪಡೆದ ಜಿಲ್ಲಾಧಿಕಾರಿಗಳು, ಈಗಾಗಲೇ ಜಿಲ್ಲಾ ವಿಪತ್ತು ಪರಿಹಾರ ನಿಧಿ ಮೂಲಕ ಅನೇಕ ವೈದ್ಯಕೀಯ ಪರಿಕರಗಳು ಹಾಗೂ ಅವಶ್ಯಕ ವಸ್ತುಗಳನ್ನು ತರಿಸಿಕೊಳ್ಳಲಾಗಿದೆ. ಇನ್ನೂ ಅವಶ್ಯಕವಾದಂತ ಪರಿಕರಗಳು ಬೇಕಾದಲ್ಲಿ ಮಾಹಿತಿ ಒದಗಿಸಿದರೇ ತಮಗೆ ಒದಗಿಸಿಕೊಡಲಾಗುವುದು ಎಂದರು.
ಗೃಹಬಂಧನದಲ್ಲಿರುವ 55 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಯಾರಿಗಾದರೂ ಗಂಭೀರ ರೀತಿಯ ರೋಗಗಳಿಂದ ಬಳಲುತ್ತಿದ್ದರೇ ಅಂತವರ ಮಾಹಿತಿ ಪಡೆದು ಅಂತವರಿಗೆ ವಿಶೇಷ ಚಿಕಿತ್ಸೆ ನೀಡಿ ಎಂದು ಹೇಳಿದ ಜಿಲ್ಲಾಧಿಕಾರಿ ನಕುಲ್ ಅವರು, ಎಲ್ಲ ರೀತಿಯ ಕೊರೊನಾ ಪಾಸಿಟಿವ್ ಪ್ರಕರಣಗಳ ಚಿಕಿತ್ಸಗೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿರುವ ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆ ಹಾಗೂ ಸಂಶಯಾಸ್ಪದ ಕೊರೊನಾ ಲಕ್ಷಣಗಳಿರುವ ಮತ್ತು ವರದಿಗಾಗಿ ಕಾಯುತ್ತಿರುವವರನ್ನು ಟಿಬಿ ಸ್ಯಾನಿಟೋರಿಯಂ ನಲ್ಲಿಯೇ ಇರುವುದಕ್ಕೆ ವ್ಯವಸ್ಥೆ ಮಾಡಬೇಕು ಮತ್ತು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಸಂಜೀವಿನಿ ಆಸ್ಪತ್ರೆಯನ್ನು ಸಹ ಕೋವಿಡ್ ಸೊಂಕಿತರ ಚಿಕಿತ್ಸೆಗಾಗಿ ಮೀಸಲಿಡಲಾಗಿದ್ದು, ಅಲ್ಲಿ ಗಂಭೀರ ಚಿಕಿತ್ಸೆ ಪಡೆಯುತ್ತಿರುವವರನ್ನು ವಿಮ್ಸ್ಗೆ ಹಾಗೂ ಸಾಮಾನ್ಯ ಚಿಕಿತ್ಸೆಗಾಗಿ ಸಂಡೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಪಡೆಯುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಪಿಜೆ ಸಂಜೀವಿನಿ ಆಸ್ಪತ್ರೆ ಎದುರುಗಡೆ ರೋಗಿಗಳನ್ನು ವಿಮ್ಸ್ ಮತ್ತು ಸಂಡೂರು ತಾಲೂಕು ಆಸ್ಪತ್ರೆಗೆ ಕಳುಹಿಸುವುದಕ್ಕೆ ಅಂಬ್ಯುಲೆನ್ಸ್ ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.
ರ್ಯಾಪಿಡ್ ಟೆಸ್ಟ್ ಮಶೀನ್ಗಳು ಇದೇ 12ರಂದು ಜಿಲ್ಲೆಗೆ ಬರಲಿದ್ದು, ಅವುಗಳಿಂದ ಪರೀಕ್ಷಿಸುವುದಕ್ಕೆ ಸಂಬಂಧಿಸಿದಂತೆ ಕ್ವಾರಂಟೈನ್ನ ವೈದ್ಯರು ಹಾಗೂ ಫೀವರ್ಕ್ಲಿನಿಕ್ನಲ್ಲಿರುವ ವೈದ್ಯರಿಗೆ ತರಬೇತಿ ಕೊಡಿಸಿ ಎಂದು ಡಿಸಿ ನಕುಲ್ ಸೂಚಿಸಿದರು.
ದಾನಿಗಳ ನೆರವಿನಿಂದ ಫಫರ್ೆಕ್ಟ್ ಕಿಟ್ನನ್ನು ಹೋಮ್ ಕ್ವಾರಂಟೈನ್ನಲ್ಲಿರುವವರಿಗೆ ನೀಡಲಾಗುತ್ತಿದ್ದು, ಐಸೋಲೇಶನ್ ವಾಡರ್್ನಲ್ಲಿರುವವರಿಗೂ ಒದಗಿಸಲಾಗುವುದು ಎಂದು ಜಿಪಂ ಸಿಇಒ ಕೆ.ನಿತೀಶ್ ಸಭೆಯಲ್ಲಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಮಾತನಾಡಿದರು.ಈ ಸಂದರ್ಭದಲ್ಲಿ ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ವಿಮ್ಸ್ ನಿದರ್ೇಶಕ ಡಾ.ದೇವಾನಂದ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 