ಸವದತ್ತಿಯಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ
Distribution of agricultural machinery to farmers in Savadatti
ಸವದತ್ತಿ, ಸೆ. 3: ನಗರದ ಕರೀಕಟ್ಟಿ ಕ್ರಾಸ್ ರಸ್ತೆಯಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ 2026-27ನೇ ಸಾಲಿನ ಸರ್ಕಾರದ ಸಹಾಯಧನದಡಿ ಅರ್ಹ ರೈತರಿಗೆ ಕೃಷಿ ಯಂತ್ರೋಪಕರಣಗಳು ಹಾಗೂ ಸೂಕ್ಷ್ಮ ನೀರಾವರಿ ಘಟಕಗಳನ್ನು ವಿತರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕೃಷಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಮಂಜೂರಾದ ವಿವಿಧ ಆಧುನಿಕ ಕೃಷಿ ಯಂತ್ರೋಪಕರಣಗಳು ಹಾಗೂ ಸೂಕ್ಷ್ಮ ನೀರಾವರಿ ಘಟಕಗಳನ್ನು ರೈತರಿಗೆ ಸಾಂಕೇತಿಕವಾಗಿ ಹಸ್ತಾಂತರಿಸಲಾಯಿತು.
ಇಂದಿನ ದಿನಗಳಲ್ಲಿ ಕಾರ್ಮಿಕರ ಕೊರತೆ ನೀಗಿಸಲು ಹಾಗೂ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಕೃಷಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯವಾಗಿದೆ. ರೈತರು ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಕೃಷಿ ಪದ್ಧತಿಗಳತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸಲಹೆ ನೀಡಿದರು.
ರೈತರು ಕೃಷಿ ಇಲಾಖೆಯ ಮೂಲಕ ದೊರೆಯುವ ರಿಯಾಯಿತಿ ದರದ ಯಂತ್ರೋಪಕರಣಗಳು, ಹನಿ ನೀರಾವರಿ ಹಾಗೂ ಇತರ ಕೃಷಿಪೂರಕ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದು ಅವರು ಹೇಳಿದರು.
ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕೃಷಿಯಲ್ಲಿ ಉತ್ಪಾದಕತೆ ಹೆಚ್ಚಿಸಿಕೊಳ್ಳಬೇಕು ಎಂದು ರೈತರಿಗೆ ಕರೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಮಾತನಾಡಿ, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಲೀಂ ಸಂಗತ್ರಾಪುರ, ಬಸವರಾಜ ಅಯ್ಯನಗೌಡ್ರ, ಉಮೇಶ ಬೋಳೆತ್ತಿನ, ಇಮ್ರಾಪುರ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 