ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ
Distribution of bus passes to rural journalists
ಬೆಳಗಾವಿ, ಫೆ.12: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಡಿ ಜಿಲ್ಲೆಯ ಕೆಲ ತಾಲ್ಲೂಕುಗಳ ಪತ್ರಕರ್ತರಿಗೆ ಗುರುವಾರ ಉಚಿತ ಬಸ್ ಪಾಸ್ ವಿತರಿಸಲಾಯಿತು.
ಗ್ರಾಮೀಣ ಪತ್ರಕರ್ತರಿಗೆ ನೆರವಾಗಲೆಂದು ಕಳೆದ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ವಾರ್ತಾ ಇಲಾಖೆ ಉಪನಿರ್ದೇಶಕರಾದ ಗುರುನಾಥ ಕಡಬೂರ ಅವರು ಕಿತ್ತೂರು ತಾಲ್ಲೂಕಿನ ಹಿರಿಯ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಿದರು. ನಂತರ ಮಾತನಾಡಿದ ಅವರು, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸರ್ಕಾರದ ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬಹುದು.
ಈ ಸಂದರ್ಭದಲ್ಲಿ ವಾರ್ತಾ ಸಹಾಯಕರಾದ ವಿಜಯಕುಮಾರ್ ಬೆಟಗೇರಿ, ಪ್ರ.ದ.ಸ. ಎಂ.ಎಲ್.ಜಮಾದಾರ ಉಪಸ್ಥಿತರಿದ್ದರು. ಗ್ರಾಮೀಣ ಪತ್ರಕರ್ತರಾದ ಪ್ರದೀಪಕುಮಾರ ಮೇಲಿನಮನಿ, ಉಳವಯ್ಯ ಹಿರೇಮಠ ಅವರಿಗೆ ಬಸ್ ಪಾಸ್ ವಿತರಿಸಲಾಯಿತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 