ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರಿಗೆ ಗಣತಿ ನಮೂನೆ ವಿತರಣೆ
Distribution of census forms to MLC Sunilgouda Patil.
ಲೋಕದರ್ಶನ ವರದಿ
ವಿಜಯಪುರ 30: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಿದರು.
ಮನೆ-ಮನೆಗೆ ತೆರಳಿ ಮತದಾರರ ವಿವರ ಸಂಗ್ರಹ ಹಾಗೂ ಗಣತಿ ನಮೂನೆ ವಿತರಣೆ ಕಾರ್ಯ ಜಿಲ್ಲಾದ್ಯಂತ ನಡೆಯುತ್ತಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 