ಮಹಿಳಾ ಫಲಾನುಭವಿಗಳಿಗೆ ನಾಟಿ ಕೋಳಿ ಮರಿಗಳ ವಿತರಣೆ
Distribution of chicken chicks to female beneficiaries
ಹಾವೇರಿ 10 : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಅರ್ಹ ಬಡ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ನಾಟಿ ಕೋಳಿಮರಿಗಳ ವಿತರಣೆ ಕಾರ್ಯಕ್ರಮ ಮಂಗಳವಾರ ಹಾವೇರಿ ನಗರದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಚೇರಿ ಆವರಣದಲ್ಲಿ ಜರುಗಿತು.
ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಮ್.ಎಮ್. ಮೈದೂರು ಅವರು ಸಾಂಕೇತಿಕವಾಗಿ ನಾಟಿ ಕೋಳಿ ಮರಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎಸ್.ವಿ ಸಂತಿ ಮಾತನಾಡಿ, ನಾಟಿ ಕೋಳಿ ತಳಿಯು ಗ್ರಾಮೀಣ ಭಾಗದ ಮಹಿಳಾ ಫಲಾನುಭವಿಗಳಿಗೆ ವರದಾನವಾಗಿದೆ. ಗ್ರಾಮೀಣ ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಪರಮೇಶ.ಎನ್ ಹುಬ್ಬಳ್ಳಿ ಅವರು ಮಾತನಾಡಿ, ಈ ತಳಿಯು ಮೊಟ್ಟೆ ಉತ್ಪಾದನೆ ಹಾಗೂ ಮಾಂಸದ ಉತ್ಪಾದನೆ ಎರಡಕ್ಕೂ ಕೂಡ ಅರ್ಹ ತಳಿಯಾಗಿದೆ. ಒಂದು ಕೋಳಿಯು ವರ್ಷಕ್ಕೆ ಸರಾಸರಿ 80 ರಿಂದ 100 ಮೊಟ್ಟೆಗಳ ಉತ್ಪಾದನೆಯ ಸಾಮರ್ಥ್ಯ ಹೊಂದಿದ್ದು, 3 ರಿಂದ 4 ತಿಂಗಳ ವಯಸ್ಸಿನಲ್ಲಿ ಸುಮಾರು 2 ರಿಂದ 3 ಕೆ.ಜಿಯಷ್ಟು ತೂಕ ಹೊಂದುತ್ತದೆ. ಇತರೇ ಕೋಳಿಗಳಿಗಿಂತ ರೋಗ ನಿರೋಧಕ ಶಕ್ತಿಯು ಇದರಲ್ಲಿ ಹೆಚ್ಚಾಗಿದ್ದು, ಗ್ರಾಮೀಣ ಮಹಿಳೆಯರು ಹಿತ್ತಲ ಕೋಳಿಗಳಾಗಿ ಇವುಗಳನ್ನು ಅತೀ ಕಡಿಮೆ ಖರ್ಚಿನಲ್ಲಿ ಸಾಕುವುದರಿಂದ ತುಂಬಾ ಲಾಭದಾಯಕವಾಗಿದೆ ಎಂದರು.
ಇಲಾಖೆ ವತಿಯಿಂದ ಹಾವೇರಿ ತಾಲೂಕಿನ ಕುಕ್ಕಟ ಮಹಾಮಂಡಳಿಯಿಂದ ಆಯ್ಕೆಯಾದ 89 ಫಲಾನುಭವಿಗಳಿಗೆ ಕಾರ್ಯಕ್ರಮದಡಿಯಲ್ಲಿ ಪ್ರತಿ ಫಲಾನುಭವಿಗೆ 5 ವಾರದ 20 ಕೋಳಿ ಮರಿಗಳಂತೆ ಒಟ್ಟು 1,780 ಕೋಳಿ ಮರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೋಟ್ರೆಶಪ್ಪ ಬಸೆಗಣ್ಣಿ, ಹಿರಿಯ ಪಶುವೈಧ್ಯಾಧಿಕಾರಿ ಡಾ. ಪ್ರವೀಣಾ, ಜಾನುವಾರು ಅಭಿವೃದ್ದಿ ಅಧಿಕಾರಿ ಎಸ್.ಎಫ್ ಕರಿಯಪ್ಪನವರ, ಮಹಿಳಾ ಫಲಾನುಭವಿಗಳು ಇತರರು ಉಪಸ್ಥಿತರಿದ್ದರು.
ಜೂ.13 ರಂದು ರಕ್ತದಾನ ಜಾಗೃತಿ ಕಾರ್ಯಕ್ರಮ
ಹಾವೇರಿ 10 : ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಉಚಿತ ರಕ್ತದಾನ ಶಿಬಿರ ಹಾಗೂ ಬೀದಿನಾಟಕದ ಮೂಲಕ ರಕ್ತದಾನ ಜಾಗೃತಿ ಕಾರ್ಯಕ್ರಮ ಜೂನ್ 13 ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಆಯೋಜಿಸಲಾಗಿದೆ.
ಅಂಗರಚನಾ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಮೃತ ದೇಹ ದಾನಿಗಳ ಕುಟುಂಬದ ಸದಸ್ಯರಿಗೆ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 