ಅನುದಾನಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಕಂಪ್ಯೂಟರ್, ಸ್ಕ್ಯಾನರ್ ಮತ್ತು ಪ್ರಿಂಟರ್ ವಿತರಣೆ
Distribution of computers, scanners and printers to aided high schools and colleges
ರಾಯಬಾಗ 02 : ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯ ಸೌಲಭ್ಯ ಮರು ಜಾರಿಗೊಳಿಸಲು ಮೇಲ್ಮನೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸುವುದಾಗಿ ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ ಹೇಳಿದರು. ಸೋಮವಾರ ಪಟ್ಟಣದ ಶಾಸಕರ ಗೃಹ ಕಚೇರಿ ಸಭಾಂಗಣದಲ್ಲಿ ಶಾಸಕರ (ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ) ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರಾಯಬಾಗ ಮತ್ತು ಚಿಕ್ಕೋಡಿ ತಾಲೂಕಿನ ಅನುದಾನಿತ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ಕಂಪ್ಯೂಟರ್, ಸ್ಕ್ಯಾನರ್ ಮತ್ತು ಪ್ರಿಂಟರ್ ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದರಿಂದ ಸರ್ಕಾರ ಹೇಳುವ ಶೇ.100 ಪರೀಕ್ಷೆ ಫಲಿತಾಂಶ ಪಡೆಯಲು ಶಿಕ್ಷಕರಿಗೆ ಅಸಾಧ್ಯವಾಗಿದೆ. ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ ಆದರೆ ಮಾತ್ರ ಶಿಕ್ಷಣ ಕ್ಷೇತ್ರ ಸುಧಾರಿಸಲು ಸಾಧ್ಯ ಎಂದರು.
ಶಿಕ್ಷಕರ ಎಲ್ಲ ಬೇಡಿಕೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ, ತಮ್ಮ ಎಲ್ಲ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಡಿ.ಎಮ್.ಐಹೊಳೆ ಅವರು ಮಾತನಾಡಿ, ಶಿಕ್ಷಕರ ಎಲ್ಲ ಬೇಡಿಕೆ ಮತ್ತು ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಸರ್ಕಾರದಿಂದ ಶೈಕ್ಷಣಿಕ ಕ್ಷೇತ್ರಕ್ಕೆ ದೊರೆಯುವ ಎಲ್ಲ ಸೌಲಭ್ಯಗಳು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಜಿನೇಂದ್ರ ನಿಲಜಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ಚಿಕ್ಕೋಡಿ ಡಿಡಿಪಿಐ ಆರೀ್ಸತಾರಾಮ ಮಾತನಾಡಿದರು. ಬಿಇಒ ಬಸವರಾಜಪ್ಪ ಆರ್, ಎಲ್.ಬಿ.ಚೌಗುಲೆ, ಪೃಥ್ವಿರಾಜ ಜಾಧವ, ಎಸ್.ಎಸ್. ಮಠದ, ರಾಮು ಹೂಗಾರ, ವಿ.ಎಸ್.ಪೂಜಾರಿ, ಬಸವರಾಜ ಯಲಶೆಟ್ಟಿ, ಬಸವರಾಜ ಕಾಂಬಳೆ, ಸದಾನಂದ ಹಳಿಂಗಳಿ, ಅಣ್ಣಾಸಾಹೇಬ ಖೆಮಲಾಪೂರೆ, ಸುರೇಶ ಮಾಳಿ, ಜಿಯಾವುಲ್ಲ ಮುಲ್ಲಾ, ಕರೇಪ್ಪ ನಾಯಿಕ ಹಾಗೂ ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ಕಾಲೇಜ ಪ್ರಾಚಾರ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 