ಬೆಂಗಳೂರು, ಆಗಸ್ಟ್ ಬಾಂಧವ ಸಂಸ್ಥೆಯ ವತಿಯಿಂದ ಇದೇ ಆ.31 ರಂದು ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಜಯನಗರ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥ ಎನ್ ನಾಗರಾಜ್ ತಿಳಿಸಿದ್ದಾರೆ
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಒಪಿ ಗಣೇಶ ಮೂರ್ತಿಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇನ್ನಾದರೂ ಸಾರ್ವಜನಿಕರು ಎಚ್ಚೆತ್ತು ಪರಿಸರ ಸ್ನೇಹಿ ಗಣಪತಿಯನ್ನೇ ಪೂಜಿಸಬೇಕೆಂದು ಮನವಿ ಮಾಡಿದರು.
ಪರಿಸರ ಸ್ನೇಹಿ ಗಣಪತಿ ಮೂರ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಹಾಪೌರರಾದ ಗಂಗಾಂಬಿಕಾ ಮಲ್ಲಿಕಾರ್ಜುನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಭಾಗವಹಿಸಲಿದ್ದು, ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಾಗಿ ದೂರವಾಣಿ ಸಂಖ್ಯೆ;9740399888ಕ್ಕೆ ಸಂಪರ್ಕಿಸಲು ಕೋರಲಾಗಿದೆ.