ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ
Distribution of essential materials to students from backward classes
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ
ಕೊಪ್ಪಳ 01: ನಗರಸಭೆ ವತಿಯಿಂದ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ನಗರದ ಐದು ವಸತಿ ನಿಲಯ ಗಳಿಗೆ 7.25 ಯೋಜನೆ ಅಡಿಯಲ್ಲಿ ಅಗತ್ಯ ಸಾಮಗ್ರಿಗಳನ್ನು ವಿತರಣೆ ಮಾಡುವ ಕಾರ್ಯಕ್ರಮ ನಗರಸಭೆಯ ಸಭಾಂಗಣದಲ್ಲಿ ಏರಿ್ಡಸಲಾಗಿದ್ದು ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ವಿತರಣೆ ಮಾಡಿ ಮಾತನಾಡಿದರು, ಹಿಂದುಳಿದ ವರ್ಗಗಳ ವಿಭಾಗದ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 7.25 ಯೋಜನೆ ಅಡಿಯಲ್ಲಿ ಅಗತ್ಯ ಸಾಮಗ್ರಿಗಳಾದ ಕಂಪ್ಯೂಟರ್ ಚೇರ್ ಗಳು ಊಟ ಮಾಡುವ ಗ್ಲಾಸ್ ಗಳು, ಟೇಬಲ್ ಗಳು, ಸೇರಿದಂತೆ ಅಗತ್ಯ ವಸ್ತುಗಳ ಸಾಮಗ್ರಿಗಳನ್ನು ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ನಗರ ಸಭೆ ಪರವಾಗಿ ವಿತರಣೆ ಮಾಡಿ ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು, ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಕ್ಬರ್ ಪಾಷಾ ಪಲ್ಟನ್ ಪೌರಾಯುಕ್ತ ಗಣಪತಿ ಪಾಟೀಲ್ ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕ ಅಧಿಕಾರಿ ಗಳಾದ ರಮೇಶ ಹುಬ್ಬಳ್ಳಿ ಶಿವಶಂಕರ್ ನಗರಸಭೆಯ ಕಿರಿಯ ಅಭಿಯಂತ ಸೋಮಲಿಂಗಪ್ಪ ವ್ಯವಸ್ಥಾಪಕ ಮುನಿಸ್ವಾಮಿ, ವಸತಿ ನಿಲಯಗಳ ನಿಲಯ ಪಾಲಕರು, ವಸತಿ ನಿಲಯದ ಮತ್ತು ನಗರಸಭೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 