ಡಾ. ವಿರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ವಿಕಲಚೇತನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ
Distribution of fruits and vegetables to disabled children on the occasion of Dr. Virendra Heggade's
ಬೆಳಗಾವಿ: ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಖಾಸಭಾಗದ ಯೋಜನಾ ಕಚೇರಿ ಬಿ.ಸಿ ಟ್ರಸ್ಟ್ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಪರಮ ಪೂಜ್ಯ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ವಿಕಲಚೇತನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಪೂಜ್ಯರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಬಸವರಾಜ ಸೊಪ್ಪಿಮಠ ಮಾತನಾಡಿ, ಪೂಜ್ಯರು ಸಾಮಾಜಿಕ ಸೇವೆಯ ಮೂಲಕ ಸಮಾಜದ ಆಸ್ತಿಯಾಗಿದ್ದಾರೆ. ಪೂಜ್ಯರ ಸಾಮಾಜಿಕ ಸೇವೆ ಗುರುತಿಸಿ ಭಾರತ ಸರ್ಕಾರ ಪೂಜ್ಯರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡುವ ಮೂಲಕ ದೇಶದ ಆಸ್ತಿಯಾಗಿ ಮಾಡಿದ್ದಾರೆ. ಧರ್ಮಸ್ಥಳ ಯೋಜನೆಗಳಿಂದ ಬಡವರು ಆರ್ಥಿಕವಾಗಿ, ಸದೃಢರಾಗಿದ್ದಾರೆ ಎಂದರು.
ಚತುರ್ವಿದ ದಾನ ಪರಂಪರೆಯನ್ನು ನಡೆಸಿಕೊಂಡು ಬರುವ ಮೂಲಕ ಧರ್ಮಸ್ಥಳ ಕ್ಷೇತ್ರವನ್ನು ಜಗದ್ವಿಖ್ಯಾತ ಗೊಳಿಸಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಮಾಡುವ ಮೂಲಕ ಸಮಾಜ ಸೇವೆಗೆ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ಇವತ್ತು ವಿಕಲಚೇತನ ಮಕ್ಕಳ ಜೊತೆ ಹುಟ್ಟು ಹಬ್ಬ ಆಚರಣೆ ಮಾಡಿದ್ದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಅಯ್ಯಪ್ಪ ನವದುರ್ಗ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಆನಂದ ನಾರಾಯಣ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶೈಲಜಾ ಹಿರೇಮಠ, ಬಸವರಾಜ ಹಣ್ಣಿಕೇರಿ, ತಾಲ್ಲೂಕಿನ ಯೋಜನಾಧಿಕಾರಿಯವರಾದ ಸುಭಾಸ ಪಿ.ಸಿ. ಒಕ್ಕೂಟ ಅಧ್ಯಕ್ಷರಾದ ಸುನೀತಾ, ಶಾಲಾ ಸಹಶಿಕ್ಷಕರಾದ ಶಿಲ್ಪಾ, ಮೇಲ್ವಿಚಾರಕ ಭರತ ಉಳ್ಳೂರು, ಕೃಷಿ ಮೇಲ್ವಿಚಾರಕ ಮಂಜುನಾಥ ಗೌಡ, ಸೇವಾಪ್ರತಿನಿಧಿ ಮಂಗಲಾ, ವಂದನಾ, ಗೀತಾ ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 