ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಪುಸ್ತಕ ವಿತರಣೆ
Distribution of human rights handbook to students
ಲೋಕದರ್ಶನ ವರದಿ
ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಪುಸ್ತಕ ವಿತರಣೆ
ಕಂಪ್ಲಿ 11 : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ ಬುಧವಾರ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಶ್ರೀನಿವಾಸ ರೆಡ್ಡಿ ಮಾತನಾಡಿ ನಮ್ಮ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ಮನುಷ್ಯನ ಹಕ್ಕನ್ನು ಮೂಲಭೂತ ಹಕ್ಕು ನಿಗದಿಪಡಿಸಲಾಗಿದೆ .ಈ ಪ್ರಜಾಪ್ರಭುತ್ವದಲ್ಲಿ ಎಲ್ಲಾರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಹಕ್ಕುಗಳ ಅರಿವು ಮೂಡಿಸಲು ಮಾನವ ಹಕ್ಕುಗಳ ದಿನ ಎಂದು ಆಚರಿಸಲಾಗುತ್ತದೆ.ಇದನ್ನುಎಲ್ಲಾರೂ ಅರ್ಥ ಮಾಡಿ ಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸೋಣ ಎಂದರು. ನಂತರ ವಿದ್ಯಾರ್ಥಿಗಳು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾವಿಧಿ ಭೋಧಿಸಿದರು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿಯ ಸಂಚಾಲಕಿ ರಾಜ್ಮಾ .ಟಿ.ಎಂ.ಆರ್‌ಕಾರ್ಯಕ್ರಮವನ್ನು ಆಯೋಜನೆ ಮಾಡಿದರು ನಂತರ ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಎಂಬ ಪುಸ್ತಕಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ್ ಬಿ., ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಕೆ. ಮಹೇಶ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕಲೀಲ್ ,ಗ್ರಂಥಪಾಲಕ ವೀರಭದ್ರ್ಪ ಜಿ, ಸಹಾಯಕ ಸಿದ್ಧರೂಢ, ಇತರ ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು ಡಿ002 ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 