ಪ್ರವಾಸಿ ಮಾರ್ಗದರ್ಶಿಗಳಿಗೆ ಜಾಕೆಟ್ ಹಾಗೂ ಸ್ಫೋರ್ಟ ಶೂ ವಿತರಣೆ
Distribution of jackets and sports shoes to tourist guides
ಗದಗ 27: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. 0ೋಜನೆ0ುಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ, ಪ್ರಚಾರ ಮಾಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿಗೆ ಸೇರಿದ 100 ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಪಂಗಡದ 60 ಅಭ್ಯರ್ಥಿಗಳು, ಒಟ್ಟು 160 ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಿ, ಸದರಿ ಅಭ್ಯರ್ಥಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ ಶೂ ಗಳನ್ನು ಒದಗಿಸುವಂತೆ ಕೇಂದ್ರ ಕಛೇರಿಯಿಂದ ಸೂಚಿಸಲಾಗಿತ್ತು.
ಅದರಂತೆ ಗುರುವಾರ ಸಹಾ0ುಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಗದಗ ಕಛೇರಿ0ುಲ್ಲಿ ಪ್ರವಾಸಿ ಮಾರ್ಗದರ್ಶಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ ಶೂ ವಿತರಿಸಲಾಯಿತು. ಪ್ರವಾಸಿ ಮಾರ್ಗದರ್ಶಿ ಪ್ರವೀಣ ತೆಗ್ಗಿನಮನಿ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆ ಸಹಕಾರಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಹಾ0ುಕ ನಿರ್ದೇಶಕರಾದ ಕೊಟ್ರೇಶ್ವರ.ವಾ0್.ವಿಭೂತಿ ಹಾಗೂ .ಬಸವರಾಜ ಕಡೆಮನಿ, ಪ್ರವಾಸಿ ಮಾರ್ಗದರ್ಶಿಗಳು, ಕಚೇರಿ ಸಿಬ್ಬಂದಿ ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 