ಸರ್ಕಾರಿ ಶಾಲಾ ಮಕ್ಕಳಿಗೆ 1,500 ಕಲಿಕೋಪಕರಣಗಳು ಕಿಟ್ ವಿತರಣೆ
Distribution of learning material kits to 1,500 government school children
ಬೆಳಗಾವಿ 11: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಯ ಸಹಯೋಗದಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಆರು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ 1,500 ಕಲಿಕೋಪಕರಣಗಳ ಕಿಟ್ಗಳನ್ನು ವಿತರಿಸಲಾಯಿತು.
ಈ ಕಿಟ್ಗಳಲ್ಲಿ ಶಾಲಾ ಬ್ಯಾಗ್, ನೋಟ್ಪುಸ್ತಕಗಳು, ಪೆನ್ಸಿಲ್, ಎರೇಸರ್, ಶಾರ್ನರ್, ಪೆನ್, ಕ್ರೇಯಾನ್ಸ್ ಸೇರಿದಂತೆ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ವಿವಿಧ ಪಠ್ಯಸಾಮಗ್ರಿಗಳನ್ನು ಒಳಗೊಂಡಿದ್ದವು.
ಕಾರ್ಯಕ್ರಮದ ಮುಖ್ಯ ಉದ್ದೇಶ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಮೂಡಿಸುವುದು ಹಾಗೂ ಅವರ ಕಲಿಕೆಗೆ ಅಗತ್ಯವಾದ ಮೂಲಭೂತ ಸಾಮಗ್ರಿಗಳನ್ನು ಒದಗಿಸಿ ಶಿಕ್ಷಣಕ್ಕೆ ಉತ್ತೇಜನ ನೀಡುವುದಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜೆ. ಶಿವಕುಮಾರ್, ಶ್ರೀಮತಿ ನೀತಾ ಗಂಗರಡ್ಡಿ ಹಾಗೂ ಶ್ರೀಮತಿ ವೀಣಾ ದೇಸಾಯಿ ಭಾಗವಹಿಸಿ ವಿವಿಧ ಶಾಲೆಗಳಲ್ಲಿ ಕಿಟ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೂತ್ ಫಾರ್ ಸೇವಾ ಸಂಸ್ಥೆಯು ಹಲವು ವರ್ಷಗಳಿಂದ ಸ್ವಯಂಸೇವಕರ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿವಿಧ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಕಿಟ್ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಪ್ರತಿನಿಧಿಗಳು, ಯೂತ್ ಫಾರ್ ಸೇವಾ ಬೆಳಗಾವಿ ಜಿಲ್ಲಾ ಸಂಯೋಜಕ ಶ್ರೀ ಸಂತೋಷ ಖೋತ, ಸ್ವಯಂಸೇವಕರಾದ ವೀನೀತಕುಮಾರ್, ಮಲ್ಲಿಕಾರ್ಜುನ, ಯಲ್ಲಪ್ಪ, ಸಮೀಕ್ಷಾ, ಚೈತ್ರಾ, ಸಮೃದ್ಧಿ, ಮೇಘಾ, ಪ್ರೀತಿ, ಅನಿರುದ್ಧ, ಅನೀಶ್ ಹಾಗೂ ವೈಷ್ಣವಿ ಉಪಸ್ಥಿತರಿದ್ದರು. ಅಲ್ಲದೆ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸ್ಥಳೀಯ ಸಮುದಾಯದ ಸದಸ್ಯರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇಂತಹ ನೆರವು ಮತ್ತು ಸಹಕಾರಗಳು ಅವರ ಶೈಕ್ಷಣಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು ಅಭಿಪ್ರಾಯಪಟ್ಟರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 