ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ
Distribution of milk, fruits, and bread to patients at the government health center
ಲೋಕದರ್ಶನ ವರದಿ
ಕಂಪ್ಲಿ, ಆ.5: ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಂಪ್ಲಿ ಮಂಡಲದ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಹಾಗೂ ಬಾಣಂತಿಯರಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸುವ ಸೇವಾ ಕಾರ್ಯಕ್ರಮ ಬುಧವಾರ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ ಮಾತನಾಡಿ, ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಅವರು ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಇಂದಿಗೂ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಜನ್ಮದಿನದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸುವುದರ ಜೊತೆಗೆ, ಪಟ್ಟಣದ 4ನೇ ವಾರ್ಡ್ನ ಸಂತೇಮಾರ್ಕೆಟ್ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 180ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ ಹಾಗೂ ಪೆನ್ಸಿಲ್ಗಳನ್ನು ವಿತರಿಸಲಾಯಿತು.
ಇದಕ್ಕೂ ಮುನ್ನ ಪಟ್ಟಣದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಟಿ.ಎಚ್. ಸುರೇಶ್ಬಾಬು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಲಭಿಸಲಿ ಹಾಗೂ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಜನಸೇವೆಗೆ ಅವಕಾಶ ದೊರೆಯಲಿ ಎಂದು ಕಾರ್ಯಕರ್ತರು ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪುರಸಭೆ ಸದಸ್ಯ ಡಾ. ವಿ.ಎಲ್. ಬಾಬು, ಎಸ್.ಎಂ. ನಾಗರಾಜ, ಟಿ.ವಿ. ಸುದರ್ಶನರೆಡ್ಡಿ, ಹೂಗಾರ್ ರಮೇಶ್, ಜಿಲ್ಲಾ ಉಪಾಧ್ಯಕ್ಷ ಅಳ್ಳಳ್ಳಿ ವೀರೇಶ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಎನ್. ಮನೋಜ್ ಗೌಡ, ಬಿಎಲ್‌ಎ-1 ಗೊತ್ತಿ ಶ್ರೀನಿವಾಸ್ ಸೇರಿದಂತೆ ವಿವಿಧ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಶಾಲೆಯಲ್ಲಿ ನಡೆದ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಗುರು ಈಶ್ವರ ಹಾಗೂ ಶಿಕ್ಷಕರ ವೃಂದ ಭಾಗವಹಿಸಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 