ಕೇಜ್ರಿವಾಲ್ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಮುಖ್ಯಮಂತ್ರಿ ಅತಿಶಿ ಆರೋಪ

Distribution of money by BJP in the constituency Kejriwal is contesting: Chief Minister Atishi alleg

ನವದೆಹಲಿ 25: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸುತ್ತಿರುವ ನವದೆಹಲಿಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅತಿಶಿ ಇಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅತಿಶಿ, ಬಿಜೆಪಿಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರ ನಿವಾಸದಲ್ಲಿ ಸ್ಲಂ ಕ್ಲಸ್ಟರ್‌ಗಳ ಮಹಿಳೆಯರಿಗೆ ತಲಾ ₹1,110 ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೋಟ್ಯಂತರ ರೂಪಾಯಿಗಳನ್ನು ಇರಿಸಲಾಗಿರುವ ಬಂಗಲೆಯ ಮೇಲೆ ದಾಳಿ ನಡೆಸುವಂತೆಯೂ ಅತಿಶಿ, ದೆಹಲಿ ಪೊಲೀಸ್, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ವಿನಂತಿಸಿದ್ದಾರೆ. ವರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿರುವ ಅವರು, ಚುನಾವಣಾ ಆಯೋಗಕ್ಕೆ ಎಎಪಿ ಔಪಚಾರಿಕ ದೂರನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಲಾಗಿದೆ ಎಂದು ಅರವಿಂದ ಕೇಜ್ರಿವಾಲ್ ಸಹ ಆರೋಪಿಸಿದ್ದಾರೆ.