ಸರ್ಕಾರಿ ಶಾಲಾ ಮಕ್ಕಳಿಗೆ ಊಟದ ತಟ್ಟೆ, ಲೋಟಗಳ ವಿತರಣೆ
Distribution of plates and tumblers to government school children
ಲೋಕದರ್ಶನ ವರದಿ
ಕಂಪ್ಲಿ, ಆ.5: ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ಕಂಪ್ಲಿಯ ಸ್ಥಳೀಯ 4ನೇ ವಾರ್ಡ್ನ ಸಂತೆ ಮಾರ್ಕೆಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಹಾಗೂ ಎಂ.ಡಿ. ಕ್ಯಾಂಪಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಬುಧವಾರ ಊಟದ ತಟ್ಟೆ ಹಾಗೂ ಲೋಟಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಬಾಬು ಅವರ ಅಭಿಮಾನಿ ಲೋಹಿತ್, ಟಿ.ಎಚ್. ಸುರೇಶ್ ಬಾಬು ಅವರು ಸಮಾಜ ಸೇವಾ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದು, ನಿರಂತರವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಅವರು ಮತ್ತೊಮ್ಮೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಲಿ ಹಾಗೂ ಅವರಿಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ದೊರೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯಗುರುಗಳಾದ ಈಶ್ವರ್ಪ, ನಾಗರತ್ನ ಸೇರಿದಂತೆ ಅಭಿಮಾನಿಗಳಾದ ಬಿ. ಶ್ರೀನಿವಾಸ, ದುರುಗೇಶ್, ಸಣ್ಣಕ್ಕಿ ರಾಜಶೇಖರ, ಶಿವಕುಮಾರ, ಲಿಂಗರಾಜು, ಉಮೇಶ್, ಮೆಟ್ರಿ ಸುರೇಶ್, ಮಂಜುನಾಥ, ಮಲ್ಲಿಕಾರ್ಜುನ, ಸಂತೋಷ್, ಪ್ರಕಾಶ್, ಸುರೇಶ್, ರಾಜ, ಸಣ್ಣ ನಾಗರಾಜ, ಗಾಳೆಪ್ಪ, ಸಿ.ಡಿ. ಜಡೇಶ್ ಮತ್ತಿತರರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 