ಹೊಳಗುಂದಿಯಲ್ಲಿ ಬಿತ್ತನೆ ಬೀಜಗಳ ವಿತರಣೆ
Distribution of sowing seeds in Holagundi
ಹೂವಿನಹಡಗಲಿ :27- ತಾಲೂಕಿನಾದ್ಯಂತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರ ಅನುಕೂಲಕ್ಕಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳ ವಿತರಣೆ ಪ್ರಾರಂಭಿಸಲಾಗಿದೆ ಎಂದು ಕೃಷಿ ಅಧಿಕಾರಿ ಕೆ.ಹನುಮಂತಪ್ಪ ತಿಳಿಸಿದರು.
ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಬುಧವಾರ ರೈತ ಸಂಪರ್ಕ ಉಪ ಕೇಂದ್ರದಲ್ಲಿ ರೈತರಿಗೆ ಸಬ್ಸಿಡಿ ನಾನಾ ಬಿತ್ತನೆ ಬೀಜ ವಿತರಣೆ ಸಂದರ್ಭದಲ್ಲಿ ಅವರು ಮಾತನಾಡಿ, ಮುಂಗಾರು ಹಂಗಾಮಿಗೆ ಸೂಕ್ತವಾದ , ತೊಗರಿ, ಮೆಕ್ಕೆಜೋಳ, ಹೈಬ್ರೀಡ್ ಜೋಳ, ಸಿರಿಧಾನ್ಯವಾದ ಸಜ್ಜೆ ಸೇರಿದಂತೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಬಿತ್ತನೆ ಬೀಜಗಳನ್ನು ಪಡೆಯಲು ಬಯಸುವ ರೈತರು ತಮ್ಮ ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಪಹಣಿ ತರಬೇಕು ಎಂದರು. ರೈತರು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಕೊಟ್ಟು ಬೀಜಗಳನ್ನು ಖರೀದಿಸುವ ಬದಲು ಸರ್ಕಾರದ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.ರೈತರಿಗೆ ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದ ರಾಜ್ಯ ರೈತ ಸಂಘದ ತಾಲೂಕು ಅದ್ಯಕ್ಷ ಸಿದ್ದಪ್ಪ ಹೊಸಮನಿ ಮಾತನಾಡಿ ಖಾಸಗಿ ಕಂಪನಿಗಳಿಂದ ಕಡಿಮೆ ದರದಲ್ಲಿ ಕಳಪೆ ಬಿತ್ತನೆ ಬೀಜಗಳನ್ನು ಖರೀದಿಸದೇ , ರೈತ ಸಂಪರ್ಕ ಕೇಂದ್ರಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.
ಇದೇ ವೇಳೆ ರೈತ ಸಂಘದ ತಾ. ಕಾರ್ಯದರ್ಶಿ ಶಿವರಾಜ ಎಂ ಹೊಳಗುಂದಿ, ಪತ್ರಕರ್ತ ಎಂ. ಅಶೋಕ.ರೈತ ಮುಖಂಡರು ವಿ.ಬಿ.ಗನಿಸಾಬ್ , ಚನ್ನಬಸಪ್ಪ ಪಕ್ಕೀರ್ಪ ಸಂಘಟನಾ ಸಹ ಕಾರ್ಯದರ್ಶಿ ದುರುಗಪ್ಪ. ಗ್ರಾ.ಪಂ.ಮಾಜಿ ಅಧ್ಯಕ್ಷರು ದಡರ್ಪ ವ್ಯವಸಾಯ ಸಹಕಾರ ಸಂಘ ಅಧ್ಯಕ್ಷ ಕಾತ್ರಿಕಿ ಕರಿ ಬಸವರಾಜ ಇದ್ದರು
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 