ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ
Distribution of sports equipment to students
ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ
ಕೊಪ್ಪಳ, 13: ಇನ್ನರ್ ವೀಲ್ ಕ್ಲಬ್ ಕೊಪ್ಪಳದ ಖಜಾಂಚಿಯಾಗಿರುವ ಶಿಲ್ಪಾ ರಾಜು ಶಶಿಮಠ ಅವರು ಕ್ಲಬ್ ದತ್ತು ಪಡೆದಿರುವ ತಾಲೂಕಿನ ಕಾಟರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದರು. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯೋಪಕರಣಗಳ ಜೊತೆಗೆ ಆಟೋಪಕರಣಗಳೂ ಅತ್ಯಂತ ಅಗತ್ಯವಾಗಿವೆ. ಶಿಕ್ಷಣದ ಜತೆಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಲು ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ತಮ್ಮ ವೈಯಕ್ತಿಕ ಹಣದಿಂದ ಉಚಿತವಾಗಿ ವಿತರಿಸುವ ಮೂಲಕ ಶಿಲ್ಪಾ ರಾಜು ಶಶಿಮಠ ಅವರು ಉತ್ತಮ ಸೇವಾ ಕಾರ್ಯ ಕೈಗೊಂಡಿದ್ದಾರೆ ಎಂದು ಶಾಲೆಯ ಶಿಕ್ಷಕ ವೃಂದ ಅಭಿನಂದಿಸಿತು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಮುಖ್ಯವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದಭಾವಿ, ಕಾರ್ಯದರ್ಶಿ ಶ್ರೀದೇವಿ ಪಾಟೀಲ್, ಐಎಸ್ಒ ಲತಾ ಪಟ್ಟಣಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯೆ ಶಾರದಾ ದಾದ್ಮಿ, ಹಿರಿಯ ಸದಸ್ಯೆ ಡಾ. ರಾಧಾ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 