8 ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Distribution of three-wheeled vehicles to 8 differently-abled persons
ರಾಯಬಾಗ 17 : ವಿಶೇಷಚೇತನರಿಗೆ ದೈನಂದಿನ ಸಂಚಾರ ಹಾಗೂ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನೀಡಲಾಗುತ್ತಿರುವ ತ್ರಿಚಕ್ರ ವಾಹನಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಪಟ್ಟಣದ ಶಾಸಕರ ಗೃಹ ಕಚೇರಿ ಆವರಣದಲ್ಲಿ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಳಗಾವಿ ಹಾಗೂ ತಾಲೂಕು ಪಂಚಾಯಿತಿ ರಾಯಬಾಗ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 8 ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.
ತ್ರಿಚಕ್ರ ವಾಹನಗಳು ವಿಶೇಷಚೇತನರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ದೈನಂದಿನ ಚಟುವಟಿಕೆಗಳಲ್ಲಿ ಸ್ವತಂತ್ರವಾಗಿ ಸಂಚರಿಸಲು ಸಹಕಾರಿಯಾಗಲಿವೆ. ಫಲಾನುಭವಿಗಳು ವಾಹನಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜೀವನೋಪಾಯಕ್ಕೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸದಾಶಿವ ಘೋರೆ್ಡ, ಪೃಥ್ವಿರಾಜ ಜಾದವ, ಸದಾನಂದ ಹಳಿಂಗಳಿ, ಸಂಗಣ್ಣ ಬಟವಾಡೆ, ಮಹೇಶ ಕರಮಡಿ, ಸಂಜು ಕಾಂಬಳೆ, ಅಜಿತ ಮಾಂಗ, ಮೋಹನ ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಟ್ಟಣದ ಶಾಸಕರ ಗೃಹ ಕಚೇರಿ ಆವರಣದಲ್ಲಿ 8 ಮಂದಿ ವಿಶೇಷಚೇತನರಿಗೆ ತ್ರಿಚಕ್ರ ವಾಹನಗಳನ್ನು ಶಾಸಕ ಡಿ.ಎಂ. ಐಹೊಳೆ ವಿತರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 