ಪೌರಕಾರ್ಮಿಕರಿಗೆ ಸಮವಸ್ತ್ರ ಸುರಕ್ಷತಾ ಪರಿಕರ ವಿತರಣೆ
Distribution of uniforms and safety equipment to civil servants
ಲೋಕದರ್ಶನ ವರದಿ
ದಾಂಡೇಲಿ 22 : ದಾಂಡೇಲಿ ನಗರ ಸಭೆ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ಎಲ್ಲ ಪೌರ ಕಾರ್ಮಿಕರಿಗೆ ಸಮವಸ್ತ್ರ ಹಾಗೂ ಸುರಕ್ಷತಾ ಪರಿಕರಗಳನ್ನು ವಿತರಿಸಿದೆ. ಪೌರಾಯುಕ್ತ ವಿವೇಕ್ ಬನ್ನೆ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ನೀರೀಕ್ಷಕ ವಿಲಾಸ್ ಕುಮಾರ ಅವರು ನಗರಸಭೆಯ ಪ್ರತಿಯೊಬ್ಬ ಪೌರಕಾರ್ಮಿಕರಿಗೆ ಸಮವಸ್ತ್ರ, ಕೈ ಗವಸು, ಮುಖಗವಸು, ಸುರಕ್ಷತಾ ಬೂಟು ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ವಿತರಿಸಿದರು. ನಗರದ ಸ್ವಚ್ಚತೆ ಕಾಪಾಡುವ ಕಾರ್ಯದಲ್ಲಿ ನಿರತರಾಗಿರುವ ಪೌರ ಕಾರ್ಮಿಕರು ವಿವಿಧ ಆರೋಗ್ಯ ಅಪಾಯಗಳಿಗೆ ಒಳಗಾಗುವ ಸಾಧ್ಯತೆಯಿರುವದರಿಂದ ಸುರಕ್ಷತಾ ಪರಿಕರಗಳ ಬಳಕೆ ಅತ್ಯಗತ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿಯು ಕಡ್ಡಾಯವಾಗಿ ಸಮವಸ್ತ್ರ ಮತ್ತು ಸುರಕ್ಷತಾ ಪರಿಕರಗಳನ್ನು ಧರಿಸಿಕೊಂಡೇ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಈ ಕುರಿತು ಆರೋಗ್ಯ ನೀರೀಕ್ಷ್ಷಕ ವಿಲಾಸಕುಮಾರ ಮಾತನಾಡಿ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವದು. ಸಮವಸ್ತ್ರವಿಲ್ಲದೆ ಅಥವಾ ಸುರಕ್ಷತಾ ಪರಿಕರಗಳನ್ನು ಬಳಸದೆ ಕೆಲಸಕ್ಕೆ ಬರುವ ಸಿಬ್ಬಂದಿಯನ್ನು ಮನೆಗೆ ವಾಪಸ್ ಕಳಿಸಲಾಗುವದು ಎಂದ ಎಚ್ಚರಿಕೆ ನೀಡಿದರು. ನಗರಸಭೆಯ ಈ ಕ್ರಮವು ಪೌರ ಕಾರ್ಮಿಕರ ಆರೋಗ್ಯ ರಕ್ಷಣೆ, ಕಾರ್ಯಕ್ಷಮತೆ ಹೆಚ್ಚಳ ಹಾಗೂ ಸ್ವಚ್ಚತಾ ಕಾರ್ಯದಲ್ಲಿ ಶಿಸ್ತು ಪಾಲನೆಗೆ ಸಹಕಾರಿಯಾಗಲಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 