ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ
Distribution of uniforms to visiting allied personnel
ಕೊಪ್ಪಳ 01: ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 20 ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಜೂನ್ 30 ರಂದು ಜಿಲ್ಲಾಡಳಿತ ಭವನದಲ್ಲಿ ಸಮವಸ್ತ್ರದ ಕಿಟ್ ವಿತರಿಸಿದರು.
ಸಮವಸ್ತ್ರ ಕಿಟ್‌ನಲ್ಲಿ 02 ಜೊತೆ ಖಾಕಿ ಸಮವಸ್ತ್ರ, ಒಂದು ಜೊತೆ ಶೂ, ಒಂದು ಬ್ಲಾಕ್ ಬೆಲ್ಟ್, ಪ್ರವಾಸಿ ಮಿತ್ರ ಬಕಲ್, ಒಂದು ಕ್ಯಾಪ್, ಒಂದು ಜಾಕೆಟ್, ಸೈಡ್ ಮತ್ತು ಶೋಲ್ಡರ್ ಬ್ಯಾಡ್ಜ್ ಮತ್ತು ನೇಮ್‌ಬೋರ್ಡ್‌ಗಳನ್ನು ಒಳಗೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಲ್ಲೂರಿನ ಹತ್ತಿ ಕೈಮಗ್ಗ ನೇಕಾರರ ಸಂಘ ನಿಯಮಿತ(ರಿ) ದಿಂದ ಸಮವಸ್ತ್ರಗಳನ್ನು ಸಿದ್ದಪಡಿಸಲಾಗಿದೆ.
ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮ್ ಎಲ್.ಅರಸಿದ್ದಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಸೇರಿದಂತೆ ಪ್ರವಾಸಿ ಮಿತ್ರ ಸಿಬ್ಬಂದಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 