ಸ ಹಿ ಪ್ರಾ ಶಾಲೆಗೆ 66 ಸಾವಿರ ರೂ. ಬೆಲೆ ಬಾಳುವ ನಾನಾ ಸಾಮಗ್ರಿಗಳ ವಿತರನೆ : ಶ್ರೀನಿವಾಸ ಮಾನೆ
Distribution of various materials worth Rs. 66 thousand to School: Srinivas Mane
ಹಾನಗಲ್ 20 : ತಾಲೂಕಿನ ಯಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಶ್ರೀನಿವಾಸ ಮಾನೆ 50ಅ-50ಅ ಕಾರ್ಯಕ್ರಮದಡಿ 66 ಸಾವಿರ ರೂ. ಬೆಲೆ ಬಾಳುವ ನಾನಾ ಸಾಮಗ್ರಿಗಳನ್ನು ವಿತರಿಸಿದರು. ಸ್ಮಾರ್ಟ್ ಟಿವಿ, ಲೈಬ್ರರಿ ಬುಕ್ ಆಲ್ಮೇರಾ, ಲಾಕರ್ ಸ್ಟೀಲ್ ಆಲ್ಮೇರಾ, ಆಫೀಸ್ ಟೇಬಲ್ ಸೇರಿದಂತೆ ಹಲವು ಸಾಮಗ್ರಿಗಳನ್ನು ವಿತರಿಸಿದರು. ಈ ಸಾಮಗ್ರಿಗಳಿಗೆ ತಗುಲಿದ ವೆಚ್ಚದಲ್ಲಿ ಅರ್ಧ ಹಣವನ್ನು ಗ್ರಾಮಸ್ಥರು ಭರಿಸಿದ್ದರೆ ಇನ್ನರ್ಧ ಹಣವನ್ನು ಶಾಸಕ ಮಾನೆ ವೈಯಕ್ತಿಕವಾಗಿ ಭರಿಸಿದ್ದಾರೆ. ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವುದು ಸರ್ಕಾರದ ಕೆಲಸ ಎನ್ನುವ ಭಾವನೆಯಿಂದ ಹೊರ ಬರಬೇಕಿದೆ. ಸರ್ಕಾರದ ನೆರವು ಪಡೆಯದೇ ತಾಲೂಕಿನಲ್ಲಿ ಕಳೆದ 2 ವರ್ಷಗಳ ಅವಧಿಯಲ್ಲಿ 95 ಶಾಲೆಗಳಿಗೆ 3 ಕೋಟಿ ರೂ. ವೆಚ್ಚದಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಕಲಿತ ಶಾಲೆಗೆ ಸೌಲಭ್ಯ ಕಲ್ಪಿಸಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ರೂಪಿಸಲಾಗಿರುವ 50ಅ-50ಅ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದರ ಪ್ರೇರಣೆಯಿಂದಲೇ ಶಿಕ್ಷಣ ಇಲಾಖೆ ಹಳೆ ಬೇರು, ಹೊಸ ಚಿಗುರು ಕಾರ್ಯಕ್ರಮ ರೂಪಿಸಿ, ಸಮುದಾಯ, ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವ ಪಡೆಯುತ್ತಿದೆ. ತಾಲೂಕಿನಲ್ಲಿ ಸಂಘ, ಸಂಸ್ಥೆಗಳು, ಸಹೃದಯಿ ದಾನಿಗಳ ಮನವೊಲಿಸಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ ದೊರಕಿಸಲಾಗುತ್ತಿದೆ. ತಾಲೂಕಿನ 11 ಶಾಲೆಗಳಲ್ಲಿ ಶೀಘ್ರ ರೋಟರಿ ಸಂಸ್ಥೆ ಶೌಚಾಲಯ ನಿರ್ಮಿಸಲಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು, ಗ್ರಾಮಸ್ಥರು, ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಫೋಟೊ:
ಯಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಶ್ರೀನಿವಾಸ ಮಾನೆ 50ಅ-50ಅ ಕಾರ್ಯಕ್ರಮದಡಿ ನಾನಾ ಸಾಮಗ್ರಿಗಳನ್ನು ವಿತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 