ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣಾ ಕಾರ್ಯಕ್ರಮ
ಗದಗ ಮಾರ್ಚ 14: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಗುರುವಾರ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯ ಸಭಾಭವನದಲ್ಲಿ ರೋಟರಿ ಸಂಸ್ಥೆ ಗದಗ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಗದಗ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಗದಗ ಇವರುಗಳ ಸಂಯುಕ್ತಾಶ್ರಯದಲ್ಲಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರಕಿಟ್‌ಗಳ ವಿತರಣಾ ಕಾರ್ಯಕ್ರಮವನ್ನು ಏರಿ್ಡಸಲಾಯಿತು.
ಡಾ.ಅರುಂಧತಿ ಕುಲಕರ್ಣಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಕಂಡುಬಂದಂತಹ ಎಲ್ಲಾ ಕ್ಷಯರೋಗಿಗಳಿಗೆ ಚಿಕಿತ್ಸೆ ಪ್ರಾರಂಭದಿಂದ ಹಿಡಿದು ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಪ್ರತಿ ತಿಂಗಳು ಪೌಷ್ಠಿಕ ಆಹಾರ ಕಿಟ್‌ಗಳನ್ನು ಕೊಟ್ಟು ಕ್ಷಯಮಿತ್ರರನ್ನಾಗಿ ಮಾಡಿಕೊಂಡು ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕಾರ ಅತೀ ಮುಖ್ಯ ಎಂದು ಕಾರ್ಯಕ್ರಮದಲ್ಲಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಡಾ.ಆರ್.ಬಿ.ಉಪ್ಪಿನ, ಅಧ್ಯಕ್ಷರು ರೋಟರಿ ಸಂಸ್ಥೆ ಗದಗ ಇವರು ಉಪಸ್ಥಿತರಿದ್ದು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಆರೋಗ್ಯ ದೃಷ್ಟಿಯಿಂದ ಜನಸೇವೆಗೆ ನಮ್ಮ ಸಂಸ್ಥೆಯು ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಶಿವಾಚಾರ್ಯ ಹೊಸಳ್ಳಿಮಠ, ಶ್ರೀಧರ ಸುಲ್ತಾನಪುರ, ಡಾ.ಸತೀಶ ಘಾಟಗೆ, ವಿಶ್ವ ಆರೋಗ್ಯ ಸಲಹೆಗಾರರು, ಡಾ.ಪ್ರೀತ ಕೋನಾ, ತಾಲೂಕಾ ಆರೋಗ್ಯಾಧಿಕಾರಿಗಳು, ಅಶ್ವತ್ಥರೆಡ್ಡಿ ಎನ್ ಟಿ, ಕಾರ್ಯಕ್ರಮದ ಸಂಯೋಜಕರು, ಶ್ರೀಮತಿ ರೇಣುಕಾ ಪಿ, ಪಿಪಿಎಂ ಸಂಯೋಜಕರು, ಹಾಗೂ ಎಲ್ಲ ಎನ್‌ಟಿಇಪಿ ಸಿಬ್ಬಂದಿಯವರುಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಫ್ ಪಿ ಮೋದಿನ್ನವರ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 