ಇಂದು ಜಿಲ್ಲಾ ಸಲಹಾ ಸಮಿತಿ ಸಭೆ

District Advisory Committee meeting today

ಇಂದು ಜಿಲ್ಲಾ ಸಲಹಾ ಸಮಿತಿ ಸಭೆ 

ಬಳ್ಳಾರಿ 04: ಜಿಲ್ಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ 1994 ರ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.