ಸುವಿಶೇಷ ಅಪಘಾತ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಭೇಟಿ ಪರಿಶೀಲನೆ
ಬಳ್ಳಾರಿ,ಜು.07: ಪ್ರಧಾನಮಂತ್ರಿ ಸ್ವಸ್ಥ ಸುರಕ್ಷಾ ಯೋಜನೆ ಅಡಿ ಬಳ್ಳಾರಿಯಲ್ಲಿ ನಿಮರ್ಿಸಲಾಗಿರುವ ಸುವಿಶೇಷ ಅಪಘಾತ ಆಸ್ಪತ್ರೆ(ಟ್ರಾಮಾಕೇರ್ ಸೆಂಟರ್)ಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸುವಿಶೇಷ ಅಪಘಾತ ಆಸ್ಪತ್ರೆ(ಟ್ರಾಮಾಕೇರ್ ಸೆಂಟರ್)ಯಲ್ಲಿ ಕೊರೊನಾ ಸೊಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಉದ್ದೇಶಿಸಿದೆ.ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಟ್ರಾಮಾಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಟ್ರಾಮಾಕೇರ್ ಸೆಂಟರ್ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು,ಇನ್ನೂ ಅಲ್ಪ ಕಾಮಗಾರಿ ಬಾಕಿ ಉಳಿದಿರುವುದನ್ನು ಸಚಿವ ಆನಂದಸಿಂಗ್ ಅವರು ಪರಿಶೀಲಿಸಿ ಕಾಮಗಾರಿ ಹೊಣೆಹೊತ್ತಿರುವ ಏಜೆನ್ಸಿದಾರರಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಸೆಂಟರ್ನ ನಾಲ್ಕು ಮಹಡಿಗಳಲ್ಲಿ ಹಾಕಲಾಗಿರುವ 200 ಬೆಡ್ಗಳನ್ನು(150 ಐಸಿಯು ಬೆಡ್ ಸೇರಿ) ಪರಿಶೀಲಿಸಿದರು. ಶೌಚಾಲಯ ಹಾಗೂ ಇನ್ನೀತರ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆನಂದಸಿಂಗ್ ಅವರು ಟ್ರಾಮಾಕೇರ್ ಸೆಂಟರ್ನ ಬಹುತೇಕ ಕಾಮಗಾರಿ ಮುಕ್ತಾಯವಾಗಿದ್ದು, ಇದೇ ಜು.15ಕ್ಕೆ ಇದನ್ನು ಲೋಕಾರ್ಪಣೆ ಮಾಡಬೇಕು ಅಂತ ಅಂದುಕೊಳ್ಳಲಾಗಿತ್ತು.
ಕೊರೊನಾದಿಂದ ಅಲ್ಪ ತಾಂತ್ರಿಕ ಕೆಲಸ ಮಾತ್ರ ಬಾಕಿ ಉಳಿದಿದೆ.ಅದನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಎಕ್ಸಪ್ರೆಸ್ ಫೀಡರ್ ಕೂಡ ಒದಗಿಸಲಾಗಿದೆ. ಈ ತಿಂಗಳ ಅಂತ್ಯಕ್ಕೆ ಉದ್ಘಾಟಿಸಲಾಗುವುದು ಮತ್ತು ಆರಂಭದಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಬಳಸಲಾಗುವುದು. ನಂತರ ಇದನ್ನು ಯಾವ ಉದ್ದೇಶಕ್ಕಾಗಿ ನಿಮರ್ಿಸಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ವಿಮ್ಸ್ ನಿದರ್ೇಶಕ ಡಾ.ದೇವಾನಂದ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಡಿಎಚ್ಒ ಡಾ.ಜನಾರ್ಧನ್ ಮತ್ತಿತರರು ಇದ್ದರು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 