22 ವರ್ಷಗಳ ಸೇವೆಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
District Best Teacher Award for 22 years of service
ಲೋಕದರ್ಶನ ವರದಿ
ಜಮಖಂಡಿ ಸೆ.11: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಗಣಿತ ಶಿಕ್ಷಕಿ ಶ್ರೀಮತಿ ಅಫ್ರೋಜ್ ಚಂದಾವಾಲೆ ಅವರಿಗೆ 2026ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
22 ವರ್ಷಗಳ ನಿಸ್ವಾರ್ಥ ಸೇವೆ, ಬಾಲಕಿಯರ ಶಿಕ್ಷಣದ ಬಗ್ಗೆ ಕಾಳಜಿ ಹಾಗೂ ಬಡ ಮಕ್ಕಳ ಶಿಕ್ಷಣಕ್ಕಾಗಿ ನಿರಂತರವಾಗಿ ಸ್ಪಂದಿಸುತ್ತಿರುವುದನ್ನು ಗುರುತಿಸಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಉಪನಿರ್ದೇಶಕರ ಕಚೇರಿ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರೌಢಶಾಲಾ ಹಂತದಲ್ಲಿ ಗಣಿತವನ್ನು ಸರಳವಾಗಿ ಬೋಧಿಸಿ, ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಆಸಕ್ತಿ ಮೂಡಿಸುವ ಮೂಲಕ ಶಾಲಾ ಫಲಿತಾಂಶ ಸುಧಾರಣೆಗೆ ಅವರು ಶ್ರಮಿಸುತ್ತಿದ್ದಾರೆ ಎಂದು ಉಪಪ್ರಾಂಶುಪಾಲ ಮಹಾಂತೇಶ ನರಸನಗೌಡ್ರ ತಿಳಿಸಿದ್ದಾರೆ. ಪ್ರಶಸ್ತಿ ಪಡೆದ ಶಿಕ್ಷಕಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕು ಘಟಕದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 