ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ

ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ  District Chamber of Commerce and Industry felicitates Prof. A.P. Jnanaprakash

ಬಳ್ಳಾರಿ 20: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀ ಅವ್ವಾರು ಮಂಜುನಾಥ್ ಅವರು ಆತ್ಮೀಯವಾಗಿ ಭೇಟಿ ಮಾಡಿ ಅಭಿನಂದಿಸಿ ಸನ್ಮಾನಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಅವ್ವಾರು ಮಂಜುನಾಥ್ ಅವರು, ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರ ಅಪಾರ ಶೈಕ್ಷಣಿಕ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ಅಮೂಲ್ಯ ಸೇವೆಯನ್ನು ಶ್ಲಾಘಿಸಿದರು.  

ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಇನ್ನಷ್ಟು ಪ್ರಗತಿ ಸಾಧಿಸಿ, ಗುಣಮಟ್ಟದ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸಲಿ ಎಂದು ಶುಭ ಹಾರೈಸಿದರು.  

ಸನ್ಮಾನ ಸ್ವೀಕರಿಸಿದ ಪ್ರೊ. ಎ.ಪಿ. ಜ್ಞಾನಪ್ರಕಾಶ್ ಅವರು, ಅಭಿನಂದನೆ ಹಾಗೂ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ, ವಿಶ್ವವಿದ್ಯಾಲಯದ ಅಭಿವೃದ್ಧಿ ಮತ್ತು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.