ಜಿಲ್ಲಾ ಬಾಲ ಕಾರ್ಮಿಕ ಯೋಜನೆ ವತಿಯಿಂದ ದಾಳಿ: ಕಿಶೋರ ಕಾರ್ಮಿಕರ ರಕ್ಷಣೆ
District Child Labor Project raids: Protection of juvenile workers
ಜಿಲ್ಲಾ ಬಾಲ ಕಾರ್ಮಿಕ ಯೋಜನೆ ವತಿಯಿಂದ ದಾಳಿ: ಕಿಶೋರ ಕಾರ್ಮಿಕರ ರಕ್ಷಣೆ
ಕೊಪ್ಪಳ 27 : ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸದಸ್ಯರ ತಂಡವು ಅಕ್ಟೋಬರ್ 23 ಮತ್ತು 24 ರಂದು ಜಿಲ್ಲೆಯ ಆಯ್ದ ಪ್ರದೇಶಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸಿತು. ತಪಾಸಣೆ ವೇಳೆ ಪತ್ತೆಯಾದ ಬಾಲ ಕಾರ್ಮಿಕ, ಕಿಶೋರ ಕಾರ್ಮಿಕರನ್ನು ಸೂಕ್ತ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.
ಜಿಲ್ಲಾಧಿಕಾರಿಗಳು ಅಕ್ಟೋಬರ್ 17 ರಂದು ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೊಪ್ಪಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿಕ ದಾಳಿ, ತಪಾಸಣೆಗಳನ್ನು ಕೈಗೊಳ್ಳಲು ಸೂಚಿಸಿದ್ದರು. ಅದರಂತೆ ಸಮಿತಿ ಸದಸ್ಯರು ಅಕ್ಟೋಬರ್ 23 ರಂದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ತಪಾಸಣೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭ ಗಿಣಿಗೇರಾ ಸುತ್ತಮುತ್ತ ಇರುವ ಇಟ್ಟಂಗಿ ಭಟ್ಟಿಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಯಾವುದೇ ಮಕ್ಕಳು ಕೆಲಸ ನಿರ್ವಹಿಸುವುದು ಕಂಡು ಬಂದಿರುವುದಿಲ್ಲ. ಹಾಗೂ ರಸ್ತೆಯ ಅಕ್ಕ-ಪಕ್ಕದಲ್ಲಿರುವ ಹೋಟೆಲ್, ಡಾಬಾಗಳನ್ನು ಪರೀಶೀಲಿಸಲಾಗಿ ಗಂಗಾವತಿ ರಸ್ತೆ ಬಳಿ ಇರುವ ಪ್ರಶಾಂತ್ ಡಾಬಾದಲ್ಲ್ಲಿ ಒಂದು ಕಿಶೋರ ಕಾರ್ಮಿಕ ಮಗು ಪತ್ತೆಯಾಗಿದ್ದು, ಡಾಬಾದ ಮಾಲೀಕರು ಕುಟುಂಬಸ್ಥರಾಗಿದ್ದರಿಂದ ಮಾಲೀಕರಿಗೆ ತಿಳುವಳಿಕೆ ಹೇಳಿ ಬಾಲಕಾರ್ಮಿಕ ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಯಿತು.
ತಪಾಸಣೆಯಲ್ಲಿ ಕಾರ್ಮಿಕ ನೀರೀಕ್ಷಕರು, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು, ಕೃಷಿ ಇಲಾಖೆ, ಮಕ್ಕಳ ಸಹಾಯವಾಣಿ-1098, ನಗರ ಸಭೆ, ಪೊಲೀಸ್ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು. ಅಕ್ಟೋಬರ್ 24 ರಂದು ಕೊಪ್ಪಳ ನಗರ ಪ್ರದೇಶದಲ್ಲಿ ಬಾಲಕಾರ್ಮಿಕ/ಕಿಶೋರ ಕಾರ್ಮಿಕ ದಾಳಿ, ತಪಾಸಣೆಯನ್ನು ಕೈಗೊಳ್ಳಲಾಯಿತು. ಬಾಲಕಾರ್ಮಿಕ ತಪಾಸಣೆ ತಂಡವು ನಗರದ ವಿವಿಧ ವಾಣಿಜ್ಯ ಸಂಸ್ಥೆಗಳನ್ನು ಪರೀಶೀಲಿಸಿದಾಗ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದಿರುವುದಿಲ್ಲ. ಸಂಸ್ಥೆಯ ಮಾಲೀಕರುಗಳಿಗೆ ಹಾಗೂ ಸಾರ್ವಜನಿಕರಿಗೆ ಬಾಲಕಾರ್ಮಿಕ ಕಾಯ್ದೆಯ ಕುರಿತು ಕರಪತ್ರಗಳನ್ನು ಮತ್ತು ಬಿತ್ತಿಪತ್ರಗಳನ್ನು ವಿತರಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು.
ಭೀಮನೂರು ರಸ್ತೆ, ಗಿಣಿಗೇರಾ ಬಳಿ ಇರುವ ಶ್ರೀ ಹುಲಿಗೆಮ್ಮ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆಯಲ್ಲಿ ಒಂದು ಹೊರ ರಾಜ್ಯದ (ಅಸ್ಸಾಂ) ರಾಜ್ಯದ ಸುಮಾರು 17 ವರ್ಷದ ಒಬ್ಬ ಕಿಶೋರ ಕಾರ್ಮಿಕ ಮಗು ಕೆಲಸ ನಿರ್ವಹಿಸುತ್ತಿರುವುದು ಹಾಗೂ ಅಲ್ಲಾ ನಗರ ರಸ್ತೆ ಗಿಣಿಗೇರಾ ಬಳಿ ಇರುವ ಎಸ್.ಆರ್.ಎಸ್ ಕೆಮಿಕಲ್ಸ್ ಕಾರ್ಖಾನೆ ಆವರಣದಲ್ಲಿ ಬಿಹಾರ ರಾಜ್ಯದ ಸುಮಾರು 14 ವರ್ಷ ಹಾಗೂ ಸುಮಾರು 16 ವರ್ಷದ ಇಬ್ಬರು ಮಕ್ಕಳು ಪತ್ತೆಯಾಗಿದ್ದು, ಮಕ್ಕಳನ್ನು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸುವುದರ ಮೂಲಕ ಪುನರ್ವಸತಿಗೊಳಿಸಲಾಯಿತು. ಹಾಗೂ ಮಕ್ಕಳ ಕಲ್ಯಾಣ ಸಮಿತಿ ಪ್ರಕ್ರಿಯೆ ಮುಗಿದ ನಂತರ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.
ಈ ತಪಾಸಣೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ಬಸವರಾಜ ಹಿರೇಗೌಡ್ರ, ಕಾರ್ಮಿಕ ನೀರೀಕ್ಷಕರಾದ ಮಂಜುಳಾ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಬಸವರಾಜ, ಕೃಷಿ ಇಲಾಖೆಯ ಶರಣಬಸಪ್ಪ, ಕೆಪಿಟಿಸಿಎಲ್ ಅಸಿಸ್ಟಂಟ್ ಇಂಜಿನಿಯರ್ ಪವನ ಹಾಗೂ ಮಕ್ಕಳ ಸಹಾಯವಾಣಿ-1098 ಸಿಬ್ಬಂದಿ ಬಸವರಾಜ ಗುಳೇದ, ಸ್ಪಂದನಾ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 