ಹಾವೇರಿ24: ಭಾರತ ಸ್ವಾತಂತ್ರ್ಯೋತ್ಸವನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚಿಸಿದರು.
73ನೇ ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಯಾವುದೇ ನ್ಯೂನ್ಯತೆಗಳು ಕಂಡುಬರಬಾರದು. ಅಚ್ಚುಕಟ್ಟಾಗಿ ಶಿಸ್ತುಬದ್ಧವಾಗಿ ದೇಶದ ಸ್ವಾತಂತ್ರ್ಯ ಸಂಭ್ರಮದ ಸ್ಮರಣೆಯ ಸಮಾರಂಭ ಯುವ ಪೀಳಿಗೆಗೆ ಸ್ಪೂತರ್ಿ ನೀಡುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಿದ್ಧತೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ಸಂಘಟಿಸಲು ಸೂಚಿಸಿದರು.
ಆ. 15 ರಂದು ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ನಡೆಯಲಿದೆ. 7-45ರ ಒಳಗಾಗಿ ಶಾಲಾ-ಕಾಲೇಜು, ವಿವಿಧ ಇಲಾಖೆಗಳಲ್ಲಿ ಧ್ವಜಾರೋಹಣ ನೆರವೇರಿಸಿ 7-45ಕ್ಕೆ ಮೈಲಾರ ಮಹದೇವಪ್ಪ ವೃತ್ತಕ್ಕೆ ಆಗಮಿಸಬೇಕು. ಮೈಲಾರ ಮಹಾದೇವಪ್ಪ ಪ್ರತಿಮೆಗೆ ಮಾಲಾರ್ಪಣೆಮಾಡಿ ಭಾರತಾಂಬೆಯ ಭಾವಚಿತ್ರದ ಮೆರವಣಿಗೆಯೊಂದಿಗೆ ವಿವಿಧ ಮಾರ್ಗದ ಮೂಲಕ 8-30ರೊಳಗಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಸಮಾವೇಶಗೊಳ್ಳುವುದು. ಇದಕ್ಕೂ ಮುನ್ನ ಹುತಾತ್ಮ ಮೈಲಾರ ವೀರ ಸೌಧ ಸ್ಮಾರಕಕ್ಕೆ ಗೌರವನಮನ, ಪುಷ್ಪಾರ್ಚನೆ ಕಾರ್ಯಕ್ರಮ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರಿಗೆ ಅವರು ಸೂಚಿಸಿದರು.
ರಾಷ್ಟ್ರಧ್ವಜ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ನಿರ್ವಹಿಸಬೇಕು. ಧ್ವಜಕಟ್ಟೆಯ ಅಲಂಕಾರ, ಕ್ರೀಡಾಂಗಣದಲ್ಲಿ ನಡೆಯುವ ಸಚಿವರ ಗೌರವ ವಂದನೆ ಸ್ವೀಕಾರ ನಂತರ ಸ್ಕೌಟ್ ಆಂಡ್ ಗೈಡ್ಸ್, ಗೃಹರಕ್ಷಕದಳ, ಎನ್.ಸಿ.ಸಿ., ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ-ಕಾಲೇಜು ವಿದ್ಯಾಥರ್ಿಗಳಿಂದ ನಡೆಯುವ ಪಥಸಂಚಲನವನ್ನು ಅತ್ಯಂತ ಶಿಸ್ತುಬದ್ಧವಾಗಿ ಸಂಯೋಜಿಸಬೇಕು. ದೇಶಭಕ್ತಿ ಪ್ರತಿಬಿಂಬಿಸುವ ಸ್ವಾತಂತ್ರ್ಯೋತ್ಸವ ನೃತ್ಯ ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ಹಾಗೂ ದೇಶಭಕ್ತಿಯನ್ನು ಬಿಂಬಿಸುವಂತೆ ವಿಶೇಷವಾಗಿ ಸಂಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕರಿಗೆ ಹಾಗೂ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಇತರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸಮಾರಂಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಯಿತು. ಕ್ರೀಡಾಂಗಣದಲ್ಲಿ ಆಸನವ್ಯವಸ್ಥೆ, ವಿದ್ಯಾಥರ್ಿಗಳಿಗೆ ಸಿಹಿ ಹಂಚಿಕೆ, ಪ್ರವೇಶ ಮಾರ್ಗದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ, ಕ್ರೀಡಾಂಗಣದ ಹೊಸ ಆವರಣದಲ್ಲಿ ವಾಹನ ನಿಲುಗಡೆ ಸೌಕರ್ಯ, ಮಳೆ ಬಂದಾಗ ಪಯರ್ಾಯ ವ್ಯವಸ್ಥೆ ಕುರಿತಂತೆ ಸಭೆಯಲ್ಲಿ ಸುದೀರ್ಘವಾಗಿ ಚಚರ್ಿಸಲಾಯಿತು.
ಸ್ವಾತಂತ್ರ್ಯೋತ್ಸವದ ಮುನ್ನಾದಿನ ನಗರದ ಸ್ವಚ್ಛತೆ, ಕ್ರೀಡಾಂಗಣದ ಸ್ವಚ್ಛತೆ, ಸಾಧಕರ ಪುತ್ಥಳಿಗಳಿಗೆ ದೀಪಾಲಂಕಾರ, ಸಕರ್ಾರಿ ಕಟ್ಟಡಗಳಿಗೆ ದೀಪಾಲಂಕಾರ ಕುಡಿಯುವ ನೀರಿನ ವ್ಯವಸ್ಥೆಗೆ ಪೌರಾಯುಕ್ತರಿಗೆ ಸೂಚನೆ ನೀಡಲಾಯಿತು.ಸಮಾರಂಭದ ಸಂದರ್ಭದಲ್ಲಿ ಅಗ್ನಿಶ್ಯಾಮಕ ದಳ ವಾಹನ ಹಾಗೂ ಅಂಬ್ಯುಲನ್ಸ್ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಕಾರ್ಯಕ್ರಮ ಸಂಯೋಜನೆ, ಪಥಸಂಚಲನ, ದ್ವಜಾರೋಹಣ, ಸನ್ಮಾನ, ಗಣ್ಯರ ಆಮಂತ್ರಣ, ಸ್ವಾತಂತ್ರ್ಯೋತ್ಸವ ಸಂದೇಶ ರೂಪಿಸುವುದು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲೀಲಾವತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಪೀರಜಾದೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದ ಹೆಗ್ಗಳಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ಆರ್.ವಾಸಣ್ಣ, ವಾತರ್ಾಧಿಕಾರಿ ಬಿ.ಆರ್.ರಂಗನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರಕಾಶ , ಪೌರಾಯುಕ್ತ ಬಸವರಾಜ ಜಿದ್ದಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶಾಕೀರ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕಿ ಶಶಿಕಲಾ ಹುಡೇದ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಸ್.ಪಾಟೀಲ, ಅಬಕಾರಿ, ಅಗ್ನಿಶ್ಯಾಮ ದಳ ಹಾಗೂ ಇತರ ಇಲಾಖಾ ಅಧಿಕಾರಿಗಳು,ಶಾಲಾ-ಕಾಲೇಜು ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು