ಆಸ್ಪತ್ರೆಗೆ ಜಿಲ್ಲಾಧಿಕಾರಿ ದೀಡೀರ್ ಭೇಟಿ: ಅವ್ಯವಸ್ಥೆ ಬಗ್ಗೆ ಅಸಮಾಧಾನ
District Collector's surprise visit to hospital: Dissatisfaction over chaos
ಜಮಖಂಡಿ 12: ನಗರದ ಸರ್ಕಾರಿ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಅವರು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ವೈದ್ಯಾಧಿಕಾರಿಗಳನ್ನು, ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಯ ದುಸ್ಥಿತಿಗೆ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಸರ್ಕಾರಿ ಆಸ್ಪತ್ರೆಗೆ ಬಡವರೇ ಹೆಚ್ಚಾಗಿ ಬರುತ್ತಾರೆ. ಅವರು ನಿಮ್ಮನ್ನು ದೇವರು ಎಂದು ನಂಬಿರುತ್ತಾರೆ, ನೀವು ರಾಕ್ಷಸರಾಗಬೇಡಿ. ರೋಗಿಗಳಿಗೆ ಉತ್ತಮ ಸೇವೆ ನೀಡಿ. ಸರ್ಕಾರ ನಿಮಗೆ ಉತ್ತಮ ವೇತನ ನೀಡುತ್ತಿದೆ, ಅದಕ್ಕೆ ತಕ್ಕಂತೆ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು.
ಆಸ್ಪತ್ರೆಯ ಆವರಣದಲ್ಲಿನ ಅಶುಚಿತ್ವ ಹಾಗೂ ಸಾರ್ವಜನಿಕ ಶೌಚಗೃಹಗಳು ಭರ್ತಿಯಾಗಿರುವುದನ್ನು ಕಂಡು ಕೆರಳಿದ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟವರಿಗೆ ಕೂಡಲೇ ನೋಟಿಸ್ ನೀಡಿ. ಇಲ್ಲದಿದ್ದರೆ ನಾನು ನಿಮಗೆ (ಮುಖ್ಯ ವೈದ್ಯಾಧಿಕಾರಿಗಳಿಗೆ) ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಹೆರಿಗೆ ಆಸ್ಪತ್ರೆಯ ಕೊಠಡಿಯಲ್ಲಿ ಸೂಕ್ತ ನಿಯಮಗಳ ಪಾಲನಾ ಫಲಕಗಳನ್ನು ಅಳವಡಿಸಲು ಸೂಚಿಸಿದರು. ಆಸ್ಪತ್ರೆಯಲ್ಲಿ ಯಾರು ಸಿಎಂ ಅಲ್ಲ, ಎಲ್ಲರೂ ಸಿಎಂಗಳೆ ಎಂದು ಮುಖ್ಯವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಗರ್ಭಿಣಿಯರಿಗೆ ಆಸ್ಪತ್ರೆಯಲ್ಲೇ ಸ್ಕ್ಯಾನಿಂಗ್ ಸೌಲಭ್ಯ ಒದಗಿಸಬೇಕು. ಹೊರಗಡೆ ಸ್ಕ್ಯಾನಿಂಗ್‌ಗೆ ಏಕೆ ಬರೆದು ಕಳುಹಿಸುತ್ತೀರಿ?" ಎಂದು ಪ್ರಶ್ನಿಸಿದ ಅವರು, ಆಸ್ಪತ್ರೆಗೆ ಅಗತ್ಯವಿರುವ ಸ್ಕ್ಯಾನಿಂಗ್ ಯಂತ್ರಗಳ ಬಗ್ಗೆ ಮಾಹಿತಿ ನೀಡಿದರೆ ಸರ್ಕಾರದಿಂದ ತರಿಸಿಕೊಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಜನರಿಕ್ ಓಷಧಿಗಳ ವಿತರಣೆಯಲ್ಲಿನ ಲೋಪಗಳ ಬಗ್ಗೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಎಬಿಆರ್‌ಕೆ ಸಿಬ್ಬಂದಿಯನ್ನು ನೇಮಿಸಿ, ರೋಗಿಗಳಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. ಮುಖ್ಯ ದ್ವಾರ ಬಾಗಿಲಿನಲ್ಲಿ ಕುಳಿತುಕೊಂಡು ರೋಗಿಗಳನ್ನು ಸ್ವಾಗತಿಸಿ. ಅವರಿಗೆ ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕೆಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಯ ಮುಂದೆ ವಯೋವೃದ್ದೆಯೊಬ್ಬಳು ನೆಲದ ಮೇಲೆ ಕುಳಿತಿರುವುದನ್ನು ಕಂಡು ಅಸಮಾಧಾನಗೊಂಡ ಡಿಸಿ, ರೋಗಿಗಳಿಗೆ ಆಸನ ಹಾಗೂ ಬಿಸಿಲು-ಮಳೆಯಿಂದ ಮೇಲ್ಭಾದಲ್ಲಿ ರಕ್ಷಣೆ ಪಡೆಯಲು ಸೂರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಆಸ್ಪತ್ರೆಯ ಅವ್ಯವಸ್ಥೆಯ ನಡುವೆಯೂ 24 ಗಂಟೆಗಳ ಕಾಲ ರೋಗಿಗಳಿಗೆ ಅತ್ಯುತ್ತಮ ಸೇವೆ ನೀಡುತ್ತಿರುವ ಲ್ಯಾಬ್ ಟೆಕ್ನಿಷಿಯನ್ ವೀರುಪಾಕ್ಷಯ್ಯ ವಿ. ಅವರ ಕರ್ತವ್ಯ ನಿಷ್ಠೆಯನ್ನು ಜಿಲ್ಲಾಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಮುಖ್ಯವೈದ್ಯಾಧಿಕಾರಿ ಡಾ. ವಾಸಣ್ಣ ಮುದಿಗೌಡರ, ಡಾ. ರಾಕೇಶ ಬಗಲಿ, ಡಾ. ಕೃಷ್ಣಾ ಬಣ್ಣದ, ಡಾ. ಗಂಗಾಧರ ಹಾಗೂ ಮುಖಂಡ ಅಬುಬಕರ ಕುಡಚಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂಧಿಗಳು ಹಾಗೂ ಸಾರ್ವಜನಿಕರು ಇದ್ದರು.
ರೋಗಿಗಳ ಕೊಠಡಿಗೆ ಭೇಟಿ ನೀಡದ ಜಿಲ್ಲಾಧಿಕಾರಿ,
ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಆವರಣ ಹಾಗೂ ಆಡಳಿತಾತ್ಮಕ ವಿಭಾಗಗಳನ್ನು ಪರೀಶೀಲಿಸಿದರೂ, ಒಳರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಅವರ ಕುಂದುಕೊರತೆ ವಿಚಾರಿಸಲಿಲ್ಲ ಎಂಬ ಮಾತುಗಳು ಕೆಲವು ರೋಗಿಗಳಿಂದ ಕೇಳಿಬಂದವು. ಇದು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಲ್ಲಿ ಕೊಂಚ ಬೇಸರ ಮೂಡಿಸಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 