ಸಮೀಕ್ಷೆಗೆ ಸಹಕಾರ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ
District Collector Divya Prabhu appeals for cooperation in the survey
ಧಾರವಾಡ ಸೆ.20: ಜಿಲ್ಲೆಯಲ್ಲಿ ಸೆ. 22ರ ಸೋಮವಾರದಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವು ಭಾಗವಹಿಸಿ, ಅಗತ್ಯ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮೀಕ್ಷೆದಾರರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆದಾರರ ಮನೆಮನೆ ಭೇಟಿ ಪೂರ್ವದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಇತರರು ಕುಟುಂಬಗಳಿಗೆ ಪ್ರಶ್ನಾವಳಿ ನೀಡಿ, ಸಮೀಕ್ಷೆಯಲ್ಲಿ ಕೇಳುವ ಮಾಹಿತಿ ಬಗ್ಗೆ ತಿಳಿಸಿದ್ದಾರೆ. ಸಮೀಕ್ಷೆ ಮಾಡುವ ಮನೆಗಳಿಗೆ ಈಗಾಗಲೇ ಸ್ಟಿಕರ್ ಸಹ ಆಂಟಿಸಿ, ಸಮೀಕ್ಷೆಗಾಗಿ ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಮೀಕ್ಷೆ ಮುಗಿಯುವವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕೆಂದು ಅವರು ಹೇಳಿದ್ದಾರೆ.
ಈಗಾಗಲೇ ಸಮೀಕ್ಷೆ ಮಾಡುವ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವಿಕೆ ಹಾಗೂ ಗಣತಿದಾರರಿಗೆ ಯಾವ ಮನೆಗಳ ಸಮೀಕ್ಷೆ ಮಾಡಬೇಕೆಂಬ ಹೊಣೆಗಾರಿಕೆ ನಿಗದಿ ಮಾಡಲಾಗಿದೆ. ಮತ್ತು ಅವರಿಗೆ ತರಬೇತಿಯನ್ನೂ ಸಹ ನೀಡಲಾಗಿದೆ.
ಸಮೀಕ್ಷೆದಾರರು ಮನೆಗಳಿಗೆ ಬಂದಾಗ ಕುಟುಂಬಸ್ಥರು ಮನೆಯ ಎಲ್ಲ ಸದಸ್ಯರ ಆಧಾರ್ ಕಾರ್ಡ್‌ಗಳನ್ನು ತೋರಿಸಿ, ವಿವರ ದಾಖಲಿಸಬೇಕಾಗುತ್ತದೆ. ಪಡಿತರ ಚೀಟಿ ಇದ್ದರೆ ಅದರಲ್ಲಿರುವ ಸಂಖ್ಯೆಯನ್ನು ಆ್ಯಪ್‌ನಲ್ಲಿ ನಮೂದಿಸಿದರೆ ಇಡೀ ಕುಟುಂಬದ ಸದಸ್ಯರ ವಿವರಗಳು ಸ್ವಯಂ ಆಗಿ ದಾಖಲಾಗುತ್ತದೆ. ಪಡಿತರ ಚೀಟಿ ಇಲ್ಲದಿದ್ದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೊರಿಸಬೇಕು. ಒಂದು ಬಾರಿ ಸದಸ್ಯರ ಎಲ್ಲ ವಿವರ ಸಂಗ್ರಹಿಸಿ, ಕುಟುಂಬದ ಮುಖ್ಯಸ್ಥರ ಒಪ್ಪಿಗೆ ಪಡೆಯಲಾಗುವುದು. ಮಾಹಿತಿ ತಪ್ಪಾಗಿದ್ದರೆ ಅದನ್ನು ಆಗಲೇ ಸರಿಪಡಿಸಿಕೊಳ್ಳಬೇಕು ಎಂದು ಸಮೀಕ್ಷೆದಾರರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ, ಪಡಿತರ ಚೀಟಿವಾರು ಪ್ರತ್ಯೇಕ ಕುಟುಂಬವೆಂದು ಪರಿಗಣಿಸಿ ಸಮೀಕ್ಷೆ ನಡೆಸಲಾಗುವುದು. ಜಿಲ್ಲೆಯಲ್ಲಿ ಅಂದಾಜು 5,46,012 ಕುಟುಂಬಗಳ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗುತ್ತದೆ. ಸರ್ಕಾರವು ಮೂಲ ಸೌಲಭ್ಯ ವಂಚಿತ ಜನ ಹಾಗೂ ಪ್ರದೇಶಗಳ ಅಭಿವೃದ್ಧಿಗೆ ಕಾರ್ಯಕ್ರಮ ಜಾರಿಗೆ ತರಲು ಅನುಕೂಲವಾಗುವಂತಹ ಹಲವು ಮಾಹಿತಿಗಳು ಸಮೀಕ್ಷೆಯಿಂದ ಲಭ್ಯವಾಗುತ್ತವೆ ಎಂದು ಅವರು ತಿಳಿಸಿದ್ದಾರೆ.
ಒಬ್ಬ ಸಮೀಕ್ಷೆದಾರ ಗರಿಷ್ಠ 150 ಕುಟುಂಬಗಳಿಗೆ ಭೇಟಿ ನೀಡಿ, ಮಾಹಿತಿ ದಾಖಲಿಸಲಿದ್ದಾರೆ. 4,880 ಗಣತಿದಾರರು ಸೆ.22 ರಿಂದ ಅ.7 ರ ವರೆಗೆ ಅಂದಾಜು 5,46,012 ಕುಟುಂಬಗಳ ಸಮೀಕ್ಷೆ ಮಾಡಲಿದ್ದಾರೆ. ಕುಟುಂಬಸ್ಥರು ಅಗತ್ಯ ಮಾಹಿತಿ ನೀಡಿ, ಹಿಂದುಳೀದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದ್ದಾರೆ.
ಛಾಯಾ ಚಿತ್ರ ಶಿರ್ಷಕೆ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಇಂದು, ಸೆ.22 ರಿಂದ ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಿದ್ಧತೆಯಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಾಗೂ ಗಣತಿದಾರರು ತೊಡಗಿರುವುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 