ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಿರುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಸೂಚನೆ
District Collector Dr. Anand K. instructed the officials to be present with comprehensive informatio
ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಿರುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಸೂಚನೆ
ವಿಜಯಪುರ ಜುಲೈ 29 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಅವರು ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಯ ಸಮಗ್ರ ಪೂರಕ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಆಗಸ್ಟ್ 8 ರಿಂದ 11ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಸಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳ ಸಮಗ್ರ ಮಾಹಿತಿಯೊಂದಿಗೆ ಉಪಸ್ಥಿತರಿರಬೇಕು ಎಂದು ಸೂಚಿಸಿದರು.
ಎಲ್ಲಾ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ದಿನಚರಿ ವಹಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿಗಳಿಗೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲನೆ ನಡೆಸಬೇಕು. ಅಧಿಕಾರಿಗಳು ಕ್ಷೇತ್ರ ಭೇಟಿ ಹೊರತಾಗಿ ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರಾ್ವಗಿ ಅನುಷ್ಠಾನಗೊಳಿಸಿ, ಅರ್ಹರಿಗೆ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ,ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 