ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರೀಶೀಲನೆ
District Collector Dr. Anand K visits and inspects examination centers
ವಿಜಯಪುರ 25: ನಗರದ ಮರಾಠಿ ವಿದ್ಯಾಲಯ ಹಾಗೂ ಹೇಮರಡ್ಡಿ ಮಲ್ಲಮ್ಮ ಪ್ರೌಢ ಶಾಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಬುಧವಾರ ಭೇಟಿ ನೀಡಿ, ಪರೀಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿಯಿಂದ ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಿ ಸುಸೂತ್ರ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ,ಭದ್ರತೆ ಕುಡಿಯುವ ನೀರು,ಅಳವಡಿಸಿರುವ ಸಿಸಿಟಿವಿ ಎಲ್ಲ ವ್ಯವಸ್ಥೆಗಳನ್ನು ಪರೀಶೀಲನೆ ನಡೆಸಿದ ಅವರು ಸಮರ್ಕವಾಗಿ ಇರುವಂತೆ ನೋಡಿಕೊಳ್ಳಿ, ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಇರಬೇಕು.ಸಮಯಪಾಲನೆ ಅನುಸರಿಸಿಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ವಹಿಸಿರುವ ಜವಾಬ್ದಾರಿ ಅಚ್ಚುಕಟ್ಟಾಗಿ ಬಹು ಎಚ್ಚರಿಕೆಯಿಂದ ನಿಭಾಯಿಸಿ ಎಂದು ಸೂಚನೆ ನೀಡಲಾಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 