ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಭೇಟಿ : ಪರೀಶೀಲನೆ
District Collector Dr. Ananda K visit to Sugar Factory: Inspection
ವಿಜಯಪುರ, ಡಿ.17 : ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರೀಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ,ಮುದ್ದೇಬಿಹಾಳ ತಹಶೀಲ್ದಾರ,ಪರಿಸರ ಅಧಿಕಾರಿ ವಿವೇಕ ಅವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 