ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪರೀಶೀಲಿಸಿದ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ
District Collector Dr. Suresh B. Itnal inspected the installation work of crust gates of Tungabhadra
ಕೊಪ್ಪಳ 10: ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಏಪ್ರಿಲ್ 9 ರಂದು ಪ್ರವಾಸ ಕೈಗೊಂಡು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.ಇದೇ ವೇಳೆ, ತುಂಗಭದ್ರಾ ಜಲಾಶಯದಲ್ಲಿ ಗೇಟ್‌ಗಳ ಫ್ಯಾಬ್ರಿಕೇಶನ್, ಬಿಚ್ಚುವಿಕೆ ಮತ್ತು ಅಳವಡಿಕೆ ಕಾಮಗಾರಿಯ ಪ್ರಸ್ತುತ ಸ್ಥಿತಿಗತಿ ಪರೀಶೀಲಿಸಿದರು.ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್‌ಗಳಲ್ಲಿ 32 ಕ್ರಸ್ಟಗೇಟ್‌ಗಳ ಫ್ಯಾಬ್ರಿಕೇಶನ್ ಪೂರ್ಣಗೊಂಡಿದೆ. 1 ಗೇಟು ಫ್ಯಾಬ್ರಿಕೇಶನ್ ಹಂತದಲ್ಲಿದ್ದು, ಹೊಸಪೇಟೆ ಫ್ಯಾಬ್ರಿಕೇಶನ್ ಕೇಂದ್ರದಲ್ಲಿ ಕೆಲಸ ಪ್ರಗತಿಯಲ್ಲಿದೆ. ಗೇಟ್ ಸಂಖ್ಯೆ 1 ರಿಂದ 14 ಮತ್ತು 16 ರಿಂದ 33 ರವರೆಗಿನ ಒಟ್ಟು 32 ಗೇಟ್‌ಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದೆ. ಗೇಟ್ ಸಂಖ್ಯೆ 15 ರ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
20 ಗೇಟ್‌ಗಳ ಪ್ರಾಯೋಗಿಕ ಚಾಲನೆ ಪೂರ್ಣಗೊಂಡಿದೆ (ಗೇಟ್ ಸಂಖ್ಯೆಗಳು: 01, 02, 03, 04, 11, 12, 17, 18, 19, 20, 24, 25, 26, 27, 28, 29, 30, 31, 32 ಮತ್ತು 33). 24 ಗೇಟ್‌ಗಳ ಅಳವಡಿಕೆ ಪೂರ್ಣಗೊಂಡಿದೆ (ಗೇಟ್ ಸಂಖ್ಯೆಗಳು: 01, 02, 03, 04, 05, 06, 07, 11, 12, 17, 18, 19, 20, 21, 24, 25, 26, 27, 28, 29, 30, 31, 32 ಮತ್ತು 33). 07 ಗೇಟ್‌ಗಳ ಕೆಲಸ ಪ್ರಗತಿಯಲ್ಲಿದೆ (ಗೇಟ್ ಸಂಖ್ಯೆಗಳು: 08, 09, 10, 13, 14, 16 ಮತ್ತು 22) ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್.ಅರಸಿದ್ದಿ, ಕೆ.ಎನ್.ಎನ್.ಎಲ್. ಮುಖ್ಯ ಎಂಜಿನಿಯರ್ ಶ್ರೀನಿವಾಸ ಮಲ್ಲಿಗವಾಡ, ಟಿಆರ್ ವಿಭಾಗದ ಇಇ ನಾಗನಾಥ, ಎಇಇ ಧರ್ಮರಾಜ್, ಟಿಬಿ ಬೋರ್ಡ್ ಇಇ ಚಂದ್ರಶೇಖರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ ಮತ್ತು ಪಂಪಾಪತಿ ಡಿ.ಕೆ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 