ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
District Collector Dr. Vijaya Mahantesh receives the Best District Election Officer Award
ಲೋಕದರ್ಶನ ವರದಿ
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಹಾವೇರಿ 25 : ಚುನಾವಣಾ ಕಾರ್ಯದ ಹೆಚ್ಚಿನ ಅನುಭವ ಹೊಂದಿದ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರಿಗೆ ರಾಜ್ಯದಲ್ಲೇ ಉತ್ತಮ ಜಿಲ್ಲಾ ಚುನಾಚಣಾಧಿಕಾರಿ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ರವಿವಾರ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಜಿಲ್ಲಾಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಹಿರೇಕೆರೂರು ತಾಲೂಕಿನ ತಹಶೀಲ್ದಾರ ಶ್ರೀಮತಿ ರೇಣುಕಾ ಎಂ. ಅವರಿಗೆ ಉತ್ತಮ ಸಹಾಯಕ ಮತದಾನ ನೊಂದಣಾಧಿಕಾರಿ ಹಾಗೂ ಹಾವೇರಿ ವಿಧಾನ ಸಭಾಕ್ಷೇತ್ರದ ಭಾಗಸಂಖ್ಯೆ 52,84ರ ಬೂತ್ ಮಟ್ಟದ ಅಧಿಕಾರಿ ಶಿಕ್ಷಕ ಗುಡ್ಡಪ್ಪ ಲಚ್ಚಮ್ಮವರ ಅವರಿಗೆ ಉತ್ತಮ ಬಿಎಲ್ಒ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 