ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ.
District Collector Dr. inspected the pre-independence day preparations. Ananda K
ವಿಜಯಪುರ ಆ.14 : ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಶುಕ್ರವಾರ ಪರೀಶೀಲಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕ್ರೀಡಾಂಗಣದಲ್ಲಿ ಧ್ವಜಾರೋಹಣ ವೇದಿಕೆ, ಪಥಸಂಚಲನ,ಗಣ್ಯರು ಹಾಗೂ ಸಾರ್ವಜನಿಕರ ಆಸನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಅವರು ಪರೀಶೀಲಿಸಿದರು. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಪಥಸಂಚಲನದಲ್ಲಿ ಭಾಗವಹಿಸುವ ತಂಡಗಳ ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭದ್ರತಾ ವ್ಯವಸ್ಥೆಗಳನ್ನು ಸಮರ್ಕವಾಗಿ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಬೋವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 