ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಇಲ್ಲ- ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ
ಹಾವೇರಿ: ಮಾ.18 : ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದರೆ ಅಂತವರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮನವಿ ಮಾಡಿಕೊಂಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು ಮೂಲತಃ ಹಾವೇರಿಯವರಾಗಿದ್ದು, ಹೊರದೇಶದಲ್ಲಿ ನೆಲೆಸಿದ್ದರೆ ಸದ್ಯದಲ್ಲೇ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅವರ ಸಂಬಂಧಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ತಿಳಿಸಿದ್ದಾರೆ.
ದುಬೈ, ಅಬ್ರಾಡ್, ಸೌದಿಅರೇಬಿಯಾ, ಸಿಂಗಾಪೂರ, ಜಪಾನ್, ಯೂರೋಪ್ ರಾಷ್ಟ್ರ ಸೇರಿದಂತೆ ಜಗತ್ತಿನ ಯಾವ ಯಾವ ದೇಶದಲ್ಲಿ ಹಾವೇರಿ ಜಿಲ್ಲೆಯವರು ವಾಸಿಸುತ್ತಿದ್ದಾರೆ, ಅವರ ಹೆಸರು, ವಿಳಾಸ ಮತ್ತು ಮಾಹಿತಿಯನ್ನು ಒದಗಿಸಬೇಕು. ಈ ಮಾಹಿತಿ ಕೇವಲ ಕರೋನಾ ಹರಡದಂತೆ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಾತ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದೇಶದಲ್ಲಿ ನೆಲೆಸಿದ ಕುಟುಂಬದ ಸದಸ್ಯರ ಮಾಹಿತಿಯನ್ನು ಆರೋಗ್ಯ ಇಲಾಖೆ ಅಥವಾ ಜಿಲ್ಲಾಡಳಿತದ ಸಹಾಯವಾಣಿ 08375-249102ಗೆ ಕರೆ ಮಾಡಿ ಸ್ವಯಂ ಪ್ರೇರಣೆಯಿಂದ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕರೋನಾ ಭಯವಿಲ್ಲ. ಮೊದಲ ಹಂತದ ಒಂದು ಮತ್ತು ಎರಡರ ಸೋಂಕು ಮಾತ್ರ ಜಿಲ್ಲೆಯಲ್ಲಿದೆ. ವಿದೇಶಿಗರ ಮೇಲೆ ಹಾಗೂ ಪ್ರವಾಸಿಗರ ಮೇಲೆ, ಹೊರ ಜಿಲ್ಲೆ, ಹೊರ ರಾಜ್ಯದ ರೈಲ್ವೆ, ಬಸ್ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ತಪಾಸಣೆ ನಡೆಸಲಾಗುತ್ತಿದೆ. ಬಸ್ ರೈಲ್ವೆ ಪ್ರಯಾಣಿಕರ ಹೊರತುಪಡಿಸಿ ಕಾರು ಇತರೆ ಸೌಕರ್ಯ ಬಳಸಿ ಪ್ರಯಾಣ ಬೆಳೆಸುವವರ ಮೇಲೂ ನಿಗಾವಹಿಸಲಾಗುವುದು ಎಂದು ವಿವರಿಸಿದರು.
ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಪ್ರಯಾಣಿಕರನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ. ಪ್ರತಿ ತಾಲೂಕು ಕೇಂದ್ರ ಹಾಗೂ ಜಿಲ್ಲಾ ಕೇಂದ್ರದಲ್ಲಿ ವೆಂಟಿಲೇಟರ್ ವ್ಯವಸ್ಥೆ ಮಾಡಲು ಹಾಗೂ ಐಸೋಲೇಷನ್ ವಾಡರ್್ಗಳನ್ನು ರಚಿಸಲಾಗಿದೆ. ಮಾಸ್ಕ್ ಸೇರಿದಂತೆ ಕರೋನಾ ತಡೆಯ ಹೆಚ್ಚುವರಿ ವೈದ್ಯಕೀಯ ಉಪಕರಣಗಳಿಗೆ ಈಗಾಗಲೇ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮಾಸ್ಕ್ ಹಾಗೂ ಸಾನಿಟೈಸರ್ ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಎಲ್ಲ ಅಂಗಡಿ ಮಾಲಿಕರಿಗೆ, ಮಾಲ್ಗಳಿಗೆ , ಮೆಡಿಕಲ್ ಶಾಪ್ಗಳಿಗೆ ಸೂಚನೆ ನೀಡಲಾಗಿದೆ. ಮಾಸ್ಕ್ ಮತ್ತು ಸಾನಿಟೈಸರ್ ಕೊರತೆ ಕುರಿತಂತೆ ಪರಿಶೀಲನೆ ನಡೆಸಿ ಹೊರ ಜಿಲ್ಲೆಯಿಂದ ತರಿಸಿಕೊಳ್ಳುವ ವ್ಯವಸ್ಥೆ ಮಾಡಲಾಗುವುದು.
ಜಿಲ್ಲಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇ ಒಳಗೊಂಡಂತೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸ್ಕ್ರೀನಿಂಗ್ ಕೌಂಟರ್ಗಳನ್ನು ತೆರೆದು ತಪಾಸಣೆ ಮಾಡಿಸಲಾಗುವುದು. ಸಂತೆಗಳ ರದ್ದು ಕುರಿತಂತೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಮಾರುಕಟ್ಟೆ, ಸಂತೆ ಸೇರಿದಂತೆ ಜನರ ದೈನಂದಿನ ಬದುಕಿಗೆ ತೊಂದರೆಯಾಗದಂತೆ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಹೆಚ್ಚು ಜನ ಗುಂಪುಗೂಡಗದಂತೆ ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ ಅಂತರ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲಾಗುವುದು. ಮೈಸೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದಾಗ್ಯೂ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಮಾಂಸ ಮಾರಾಟವನ್ನು ಜಿಲ್ಲೆಯಲ್ಲಿ ಸಧ್ಯದ ಪರಿಸ್ಥಿತಿಯಲ್ಲಿ ನಿಷೇಧಿಸಲಾಗಿಲ್ಲ. ಬೆಳವಣಿಗೆ ನೋಡಿಕೊಂಡು ನಿಷೇಧ ಕುರಿತು ತೀಮರ್ಾನಿಸಲಾಗುವುದು ಎಂದು ತಿಳಿಸಿದರು.
ಮುಂದಿನ ಎರಡು ವಾರ ಕರೋನಾ ಸಂಬಂಧಪಟ್ಟಂತೆ ಅತ್ಯಂತ ಗಂಭೀರವಾದ ಸಮಯವಾಗಿದೆ. ಈ ಅವಧಿಯಲ್ಲಿ ಗರಿಷ್ಠ ಎಚ್ಚರ ವಹಿಸಲಾಗುವುದು. ವೈದ್ಯಕೀಯ ತಂಡಕ್ಕೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ ಅವರು ಉಪಸ್ಥಿತರಿದ್ದರು.