ಭಯ ಮುಕ್ತರಾಗಿ ಪರೀಕ್ಷೆ ಎದುರಿಸಲು ಜಿಲ್ಲಾಧಿಕಾರಿ ಸ್ನೇಹಲ್‌.ಆರ್‌. ಸಲಹೆ

ಭಯ ಮುಕ್ತರಾಗಿ ಪರೀಕ್ಷೆ ಎದುರಿಸಲು ಜಿಲ್ಲಾಧಿಕಾರಿ ಸ್ನೇಹಲ್‌.ಆರ್‌. ಸಲಹೆ District Collector Snehal R. advises to face exams without fear

ಲೋಕದರ್ಶನ ವರದಿ 

ಧಾರವಾಡ ಫೆಬ್ರವರಿ 16: 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಸುಧಾರಣೆಗಾಗಿ ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮವನ್ನು ಇಂದು (ಫೆ.16) ಮಧ್ಯಾಹ್ನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಕೇಂದ್ರದಲ್ಲಿ ಏರಿ​‍್ಡಸಲಾಗಿತ್ತು.  

ಈ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್‌.ಆರ್‌. ಅವರು ಭಾಗವಹಿಸಿ, ಉತ್ತಮ ಅಂಕಗಳನ್ನು ಗಳಿಸಲು ಹೇಗೆ ಅಧ್ಯಯನ ಮಾಡಬೇಕು ಎಂಬುದರ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. 

ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 18, 20, 23 ಮತ್ತು 25 ರವರೆಗೆ ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯುತ್ತದೆ. ಈಗಾಗಲೇ ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಿಗೆ ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ವಿಷಯಗಳ 20 ಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳನ್ನು ನೀಡಲಾಗಿದೆ. ಈ ಸಂಖ್ಯೆಗಳನ್ನು ಬಳಸುವ ಮೂಲಕ ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.  

ಮಕ್ಕಳು ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಿಕೊಂಡು ಭಯಮುಕ್ತರಾಗಿ ಪರೀಕ್ಷೆ ಎದುರಿಸಬೇಕು. ವಿಷಯಗಳನ್ನು ಪರೀಕ್ಷಾ ಮಂಡಳಿ ನೀಡಿರುವ ನೀಲನಕ್ಷೆ ಹಾಗೂ ಮಾದರಿ ಪ್ರಶ್ನೆಪತ್ರಿಕೆ ಮತ್ತು ಪಾಠ ಆಧಾರಿತ ಪ್ರಶ್ನೆಗಳನ್ನು ಅಧ್ಯಯನ ಮಾಡಿ, ಉತ್ತಮ ಅಂಕ ಪಡೆಯಲು ಸಲಹೆ ನೀಡಿದರು.  

ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 43 ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಮಕ್ಕಳು ಮತ್ತು ಶಿಕ್ಷಕರು ಪರೀಕ್ಷೆಗೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಳಿ ಪರಿಹಾರ ಕಂಡುಕೊಂಡರು. 

ಜ್ಞಾನ ಸಿಂಚನ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿಗಳು, ಡಿವೈಪಿಸಿ, ವಿಷಯ ಪರೀವೀಕ್ಷಕರು ಮತ್ತು  ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.