ನಾರಾಯಣಪುರ ಜಲಾಶದಿಂದ ಕುಡಿಯುವ ಉದ್ದೇಶಕ್ಕೆ ಕೆರೆಗಳಿಗೆ ನೀರು ನೀರು ಪೋಲಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

District Collector T. Bhubalan instructs officials to ensure that water from the Narayanpur reservoi

ಲೋಕದರ್ಶನ ವರದಿ 




ನಾರಾಯಣಪುರ ಜಲಾಶದಿಂದ ಕುಡಿಯುವ ಉದ್ದೇಶಕ್ಕೆ ಕೆರೆಗಳಿಗೆ ನೀರು ನೀರು ಪೋಲಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ 


ವಿಜಯಪುರ 05:  ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಜನಹಿಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಜಿಲ್ಲೆಯ ಇಂಡಿ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ ಮತ್ತು ಚಡಚಣ ತಾಲೂಕಿನ ಕೆರೆಗಳನ್ನು ತುಂಬಿಸಲಾಗುತ್ತಿದ್ದು, ನೀರು ಪೋಲಾಗದಂತೆ  ನೋಡಿಕೊಂಡು ನಿಗಾ ವಹಿಸಲು ಹಾಗೂ  ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದ್ದಾರೆ.  

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್  ಸಭಾಂಗಣದಲ್ಲಿ  ವಿಡಿಯೋ ಕಾನ್ಫರೆನ್ಸ್‌ ಮೂಲಕ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೆರೆಗಳಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಕುಡಿಯುವ ನೀರಿಗೆ ಪ್ರಥಮಾದ್ಯತೆ ನೀಡಬೇಕು. ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯದಿಂದ ಕೆರೆಗಳನ್ನು ಭರ್ತಿಗೊಳಿಸಲು 1.50 ಟಿ.ಎಂಸಿ  ನೀರು  ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆಗಳನ್ನು ನೀರು ತುಂಬಿಸಲಾಗುತ್ತಿದ್ದು, ಜಲಾಶಯದಿಂದ ಹರಿಬಿಡಲಾದ ನೀರು ಉದ್ದೇಶಿತ ಸ್ಥಳಕ್ಕೆ ತಲುಪುವಂತೆಯೂ ಹಾಗೂ ನೀರು ಪೋಲಾಗದಂತೆೆ ತೀವ್ರ ನಿಗಾವಹಿಸಬೇಕು. ವಾಚ್ ್ಘ ವಾರ್ಡಅನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಇಂಡಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಪೊಲೀಸ್, ನೀರಾವರಿ, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿ ನೇಮಿಸಲಾಗಿದ್ದು, ಈ ನಿಟ್ಟಿನಲ್ಲಿ ತೀವ್ರ ನಿಗಾ ಇರಿಸಬೇಕು. ಅನಧಿಕೃತವಾಗಿ ಅಳವಡಿಸಲಾದ ಪಂಪಸೆಟ್‌ಗಳನ್ನು ಹೆಸ್ಕಾಂ ಇಲಾಖೆಯಿಂದ ತೆರವುಗೊಳಿಸಲು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕಾಯ್ದೆ-1964ರಂತೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 


ಕಾಲುವೆಗಳ ಮೇಲುಸ್ತುವಾರಿಗೆ ನೇಮಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ವಹಿಸಿಕೊಟ್ಟ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ತಿಳಿಸಿದ ಅವರು, ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಿತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.     

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮರ​‍್ಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ನೀರು ಪೂರೈಕೆಯ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಎದುರಾಗುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ತ್ವರಿತವಾಗಿ ಇತ್ಯರ್ಥಪಡಿಸಿಕೊಂಡು ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುಂತೆ ಅವರು ಸೂಚನೆ ನೀಡಿದರು. 


ಗ್ರಾಮ ಪಂಚಾಯತಿ ಮಟ್ಟದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಆಗದಂತೆ ಅಗತ್ಯ ಮುಂಜಾಗ್ರತೆ ಕ್ರಮವನ್ನು ಪಿಡಿಒಗಳು ವಹಿಸಬೇಕು. ಕಾಲಕಾಲಕ್ಕೆ ಈಗಾಗಲೇ ಹಲವು ಬಾರಿ ಸಭೆ ನಡೆಸಿ, ಸೂಕ್ತ ನಿರ್ದೇಶನ ನೀಡಲಾಗಿದೆ. ಯಾವುದೇ ದೂರಿಗೆ ಆಸ್ಪದ ನೀಡದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆಯೂ, ಎದುರಾಗಬಹುದಾದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ  ಪರಿಹರಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು, ಒಟ್ಟಾರೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು    ಸೂಚನೆ ನೀಡಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿಗಳಾದ ಅನುರಾಧಾ ವಸ್ತ್ರದ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ್ ಸೌದಾಗರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,   ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಣಾಧಿಕಾರಿಗಳು ಉಪಸ್ಥಿತರಿದ್ದರು.