ಮಳೆಗಾಲ ಎದುರಿಸಿಲು ಸನ್ನದ್ಧರಾಗಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ ಮೇ. 26: ಕಳೆದ ವರ್ಷ ಅಗಸ್ಟ್ ತಿಂಗಳಿನಲ್ಲಿ ಪ್ರವಾಹವನ್ನು ಎದುರಿಸಿರುವುದರಿಂದ ಈ ಬಾರಿಯೂ ಮುನ್ನೆಚ್ಚರಿಕೆಯಾಗಿ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಗಾರು ಪ್ರವಾಹ ಮುನ್ನೆಚ್ಚರಿಕಾ ಕ್ರಮದ ಕುರಿತು ಸಭೆಯಲ್ಲಿ ಮಾತನಾಡಿದ ಅವರು ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಮಳೆಯಾಗುವ ಕಾರಣದಿಂದಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಬಂಧಿಸಿದ ಎಲ್ಲ ಇಲಾಖೆಯವರು ಕೈಗೊಳ್ಳಬೇಕು. ನದಿ ತೀರದ ಪ್ರದೇಶಗಳನ್ನು ಸೇರಿದಂತೆ ಮುಳುಗಡೆಯಾಗುವ ಪ್ರದೇಶಗಳ ಮೇಲೆ ನಿಗಾ ಇಟ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಇಲಾಖೆಯ ಉಪ ವಿಭಾಗಾಧಿಕಾರಿಗಳ ಹಾಗೂ ತಹಶೀಲ್ದಾರ ಕಾಯರ್ಾಲಯದಲ್ಲಿ ಕಂಟ್ರೋಲ್ ರೂಮ್ ತೆರೆದು 24*7 ಗಂಟೆಗಳ ಕಾಲ ಸಹಾಯವಾಣಿಯನ್ನು ಪ್ರಾರಂಭಿಸಿ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಪ್ರತಿದಿನದ ಮಳೆಯ ಬಗ್ಗೆ ವರದಿಯನ್ನು ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ ಟೋಲ್ ಫ್ರೀ ನಂಬರ್ 1077 ಹಾಗೂ 08352-221261 ಗೆ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯಿಂದ ಪ್ರತಿ ತಾಲೂಕಾವಾರು ಪ್ರವಾಹ ಮುನ್ನೆಚ್ಚರಿಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಕೃಷಿ ತೋಟಗಾರಿಕೆ ಇಲಾಖೆಯವರು ಪ್ರತಿದಿನ ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿದಿನದ ಮಳೆಯ ವರದಿ ಪ್ರಕೃತಿ ವಿಕೋಪದಿಂದ ಉಂಟಾಗುವ ಮಾನವ ಜಾನುವಾರು, ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಮತ್ತು ಮಳೆಗೆ ಬಿದ್ದಿರುವ ಮನೆಗಳ ವರದಿಯನ್ನು ಪ್ರತಿದಿನ ಸಲ್ಲಿಸಬೇಕು. ಪ್ರತಿ ಹಳ್ಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದಶರ್ಿಗಳು ತಮ್ಮ ತಮ್ಮ ಸಮಾಜದಲ್ಲಿದ್ದು ಅತೀವೃಷ್ಟಿ ಬಗ್ಗೆ ಯಾವುದೇ ತೊಂದರೆಯಾಗುವ ಸಂಭವಿದ್ದಲ್ಲಿ ಆ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆಯನ್ನೂ ನೀಡಬೇಕು ಎಂದು ಹೇಳಿದರು.  

       ಹೋಬಳಿ ಮಟ್ಟದಲ್ಲಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಅಧಿಕಾರಿಗಳನ್ನು ಕಾರ್ಯಕ್ಕೆ ನಿಯೋಜಿಸಬೇಕು. ತಾಲೂಕಾ ಮಟ್ಟದಲ್ಲಿ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಯೋಜನೆಯನ್ನು ತಯಾರಿಸುವುದು. ನಗರಪಾಲಿಕೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಮಟ್ಟದ ಸಂಘ, ಸಂಸ್ಥೆಗಳು ಮಳೆಯಿಂದಾಗಿ ಏನಾದರೂ ತೊಂದರೆಗಳು ಸಂಭವಿಸುವ ಪ್ರಸಂಗ ಕಂಡುಬಂದಲ್ಲಿ ಜನರನ್ನು ಎತ್ತರದ ಸ್ಥಳಕ್ಕೆ ಸಾಗಿಸಲು ಹಾಗೂ ಸಮುದಾಯ ಭವನ, ದೊಡ್ಡ ಕಟ್ಟಡಗಳನ್ನು ಗುರುತಿಸಿ ಇಟ್ಟುಕೊಂಡಿರಬೇಕು. ಹಾಗೂ ಸಂತ್ರಸ್ತರಿಗೆ ಗಂಜಿಕೇಂದ್ರ ತೆರೆಯಲು ಹಾಗೂ ಅಡುಗೆ ಸಾಮಾನುಗಳ ವ್ಯವಸ್ಥೆಯನ್ನು ಮಾಡಿಕೊಡಬೇಕು. ಬಿಸಿಯೂಟದ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಈಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಅಗ್ನಿ ಶಾಮಕ ಇಲಾಖೆಯವರು ನದಿಗಳಲ್ಲಿ ನೀರು ಏರಿಬಂದಲ್ಲಿ ನದಿ ತೀರದ ಹಳ್ಳಿಯ ಜನರ ಸಂರಕ್ಷಣೆಗೆ ಬೋಟುಗಳ ಅವಶ್ಯಕತೆಯ ಬಗ್ಗೆ ಪರಿಶೀಲಿಸಿಕೊಳ್ಳಬೇಕು. 

  ಹೋಮ್ಗಾಡರ್್ ಸಿಬ್ಬಂದಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ಜನರ ಸಂರಕ್ಷಣೆಗೆ ನಿಲ್ಲಬೇಕು. ಆರೋಗ್ಯ ಇಲಾಖೆ ಜನಸಾಮಾನ್ಯರಿಗೆ ಔಷಧಿಗಳ ದಾಸ್ತಾನು ಕುರಿತು ಸಕರ್ಾರಿ ಆಸ್ಪತ್ರೆಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಸಂಗ್ರಹವಿದೆಯೋ ಎನ್ನುವ ಬಗ್ಗೆ ನೋಡಿಕೊಳ್ಳಬೇಕು. ದನಕರುಗಳಿಗೆ ಮೇವು, ಔಷಧಿಗಳ ವ್ಯವಸ್ಥೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾವು ಇನ್ನಿತರ ವಿಷ ಜಂತುಗಳ ಕಡಿತದಿಂದ ತೊಂದರೆಗಳಾಗುವ ಜನರಿಗೆ ಸೂಕ್ತ ಔಷದೋಪಚಾರ ನೀಡಲು ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಸೂಚಿಸಿದರು.

        ಕೆಬಿಜೆಎನ್ಎಲ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಾತನಾಡಿ ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿಯ ಜಲಾಶಯಗಳತ್ತ ದಿನಂಪ್ರತಿ ನಿಗಾ ಇಡಲಾಗಿದ್ದು, ಜಲಾಶಯಗಳ ನೀರಿನ ಪ್ರಮಾಣ, ಶೇಖರಣೆ ಹಾಗೂ ಜಲಾಶಯಗಳಿಂದ ಹರಿಬಿಡುವ ನೀರಿನ ಪ್ರಮಾಣದ ಮೇಲೆ ನಿಗಾ ಇಡಲಾಗಿದೆ. ಹಾಗೂ ಆಕಸ್ಮಿಕ ರೀತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡದಂತಿರಲು ಕನರ್ಾಟಕ ನೀರಾವರಿ ನಿಗಮಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗುವುದು ಎಂದರು.

      ನೀರಿನ ತೊಂದರೆಗಳಾಗದಂತೆ ಮುನ್ನೆಚ್ಚರಿಕೆಯಾಗಿ ನಾರಾಯಣಪೂರ ಜಲಾಶಯದಲ್ಲಿ 3 ಟಿಎಂಸಿ ಹಾಗೂ ಆಲಮಟ್ಟಿಯಲ್ಲಿ 7 ಟಿಎಂಸಿ ನೀರನ್ನು ಸಂಗ್ರಹಿಸಲಾಗಿದೆ. ಪ್ರವಾಹದಿಂದ ಹಾಗೂ ಜಲಾಶಯಗಳ ಹಿನ್ನೀರಿನಿಂದ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು, ಅಂತಹ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಮುಂಚಿತವಾಗಿಯೇ ತೆರವುಗೊಳಿಸಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

 ಸಭೆಯಲ್ಲಿ ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್, ಮಹಾನಗರ ಪಾಲಿಕೆ ಆಯುಕ್ತ ಹಷರ್ಾ ಶೆಟ್ಟಿ, ಇಡಿ ಉಪವಿಭಾಗಾಧಿಕಾರಿ ಸ್ನೇಹಲ್ ಲೋಖಂಡೆ ಹಾಗೂ ಎಲ್ಲಾ ತಾಲೂಕಾ ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.