ಎಸ್‌ಐಆರ್ ಎಣಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
District Collector launches SIR counting campaign
ಗದಗ 30: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಣಿಕೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ವಿವಿಧ ಕ್ಷೇತ್ರಗಳ ಗಣ್ಯರಿಗೆ ಎಸ್‌ಐಆರ್ ಎಣಿಕೆ ನಮೂನೆಗಳನ್ನು ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವಾನಂದ ಮಠದ ಪೂಜ್ಯ ಶಿವಾನಂದ ಶ್ರೀಗಳು, ಅಂತರರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣನವರ ಹಾಗೂ ಪ್ರಮುಖರಾದ ಅಬೂಬಕರ್ ಕಟ್ಟೀಮನಿ ಅವರಿಗೆ ನಮೂನೆಗಳನ್ನು ವಿತರಿಸಲಾಯಿತು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು.
ಜೂನ್ 30ರಿಂದ ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡೂರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 