ಸುಗಮ್ಯ ಯಾತ್ರಾ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
District Collector launches Sugamya Yatra campaign
ಸುಗಮ್ಯ ಯಾತ್ರಾ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಹಾವೇರಿ 21: ವಿಕಲಚೇತನ ವ್ಯಕ್ತಿಗಳ ಹಕ್ಕುಗಳನ್ನು ಸಂರಕ್ಷಿಸುವುದರ ಜೊತೆಗೆ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಅಂಗವಿಕಲ ವ್ಯಕ್ತಿಗಳ ಮೂಲಭೂತ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಸುಗಮ್ಯ ಯಾತ್ರಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಸರ್ಕಾರದ ಒಖಎ್ಘಇ ಮಂತ್ರಾಲಯವು ಅಂಗವಿಕಲರ ಕಲ್ಯಾಣಕ್ಕಾಗಿ ಸುಗಮ್ಯ ಯಾತ್ರಾ ಅಭಿಯಾನ ರಾಷ್ಟ್ರಾದ್ಯಂತ ಆಯೋಜಿಸಿದೆ ಎಂದರು.ಸರ್ಕಾರಿ ಕಚೇರಿಗಳು, ಸಾರ್ವಜನಿಕ ಕಟ್ಟಡಗಳು, ಮನರಂಜನೆ ಸ್ಥಳ, ಉದ್ಯಾನವನ, ಗ್ರಂಥಾಲಯ, ಮಾರುಕಟ್ಟೆ, ಪ್ರವಾಸಿತಾಣ ಮೊದಲಾದ ಸ್ಥಳಗಳಲ್ಲಿ ಅಡೆ-ತಡ ರಹಿತ ವಾತಾವರಣದ ಬಗ್ಗೆ ಮಾಹಿತಿ ಸಂಗ್ರಹಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸುಗಮ್ಯ ಯಾತ್ರಾ ಅಭಿಯಾನದ ಮಹತ್ವದ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 