ವಿಜಯಪುರ ಮೇ. 20 : ಕೋವಿಡ್-19 ರೋಗವು ವ್ಯಾಪಕವಾಗಿ ಹರಡುತ್ತಿದ್ದು, ಸಕರ್ಾರದ ಆದೇಶದನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನಮಸಾಲಾ, ಜದರ್ಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಅದು ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನಿಮ್ಯೋನಿಯಾ ಮತ್ತು ಕೋವಿಡ್-19 ಒಬ್ಬರಿಂದೊಬ್ಬರಿಗೆ ಹರಡಲು ಕಾರಣವಾಗುವುದರಿಂದ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಇವುಗಳನ್ನು ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಅದರಂತೆ ಬೀಡಿ, ಸಿಗರೇಟ್ ಸೇದುವುದರಿಂದಲೂ ಕೈಯಿಂದ ಬಾಯಿಗೆ ವೈರಸ್ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆಯಿರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೂ ಈ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.
ಕೋವಿಡ್-19 ಸೋಂಕಿತರು ಜಗಿಯುವ ತಂಬಾಕು ಹಾಗೂ ಪಾನಮಸಾಲಾ, ಜದರ್ಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದೊಬ್ಬರಿಗೆ ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ ಮಸಾಲಾ, ಜದರ್ಾ, ಖೈನಿ ಉತ್ಪನ್ನಗಳನ್ನು ವಿಜಯಪುರ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ಇದನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದವರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ -1857 ವಿಪತ್ತು ನಿರ್ವಹಣಾ ಕಾಯ್ದೆ 2005 , ಐಪಿಸಿ -188, 268, 269 ಮತ್ತು 270 ಸಿ.ಆರ್.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.