ಹಾವೇರಿ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ   District Collector visits Haveri Tahsildar's office

ಲೋಕದರ್ಶನ ವರದಿ 

ಹಾವೇರಿ, ಜು.28: ಹಾವೇರಿ ತಹಶೀಲ್ದಾರ್ ಕಚೇರಿಯ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಂಗಳವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.  

ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಸಮರ​‍್ಕ ಮಾಹಿತಿ ನೀಡಿ ಸ್ಪಂದಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.  

ಅಹವಾಲು ಆಲಿಕೆ: ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಆಲಿಸಿ, ಸಂಬಂಧಿತ ಸಮಸ್ಯೆಗಳನ್ನು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಎಸ್‌ಐಆರ್ ಪರೀಶೀಲನೆ: ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್, ಬಿಎಲ್‌ಒ ಹಾಗೂ ಬಿಎಲ್‌ಎಗಳೊಂದಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಭೆ ನಡೆಸಿ ಪ್ರಗತಿ ಪರೀಶೀಲಿಸಿದರು.

ಎಸ್‌ಐಆರ್ ಕಾರ್ಯವನ್ನು ಯಾವುದೇ ಲೋಪವಾಗದಂತೆ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.  ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಶೀಲ್ದಾರ್ ಶ್ರೀಮತಿ ಶರಣಮ್ಮ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.