ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರೀಶೀಲನೆ

District Collector visits and inspects secondary PUC examination centres

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರೀಶೀಲನೆ 

ಧಾರವಾಡ 01: ಪರೀಕ್ಷಾ ವ್ಯವಸ್ಥೆ, ಪೂರ್ವಸಿದ್ಧತೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಹಾಜರಾತಿ, ಪರೀಕ್ಷಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳ ಕಾರ್ಯವಿಧಾನವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪರೀಶೀಲಿಸಿದರು. 

ಅವರು ಇಂದು (ಮಾ.1) ಬೆಳಿಗ್ಗೆ  ಪ್ರಿಸಮ್ ಪದವಿ ಪೂರ್ವ ಕಾಲೇಜು ಮತ್ತು ಜೆ.ಎಸ್‌.ಎಸ್‌.ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು.  

ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಅಕ್ರಮಗಳು ನಡೆಯದಂತೆ ಮನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.ಪರೀಕ್ಷಾ ಹಾಜರಾತಿ: ಇಂದು ನಡೆದ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆಗೆ ಒಟ್ಟು 19,169 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 18,726 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 422 ವಿದ್ಯಾಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 97.68 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.