ಜಿಲ್ಲಾ ಸಮನ್ವಯ ಸಮಿತಿ ಸಭೆ

ಹಾವೇರಿ:  ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರದಡಿ 2ನೇ ತ್ರೈಮಾಸಿಕದ ಜಿಲ್ಲಾ ಸಮನ್ವಯ ಸಮಿತಿ ಸಭೆ ಇತ್ತೀಚೆಗೆ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

ಶಾಲಾ ಆವರಣದಲ್ಲಿ ಕೋಟ್ಪಾ-2003ರನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು ಹಾಗೂ  ತಾಲೂಕಾ ಮಟ್ಟದಲ್ಲಿ ಟಿ.ಎಲ್.ಸಿ.ಸಿ.ಯನ್ನು ಪ್ರತಿ ತ್ರೈಮಾಸಿಕ ಕಡ್ಡಾಯವಾಗಿ ನಡೆಸಿ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿಯನ್ನು ನಡೆಸಲು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪೊಲೀಸ್ ಇಲಾಖೆಯ ಡಿ.ಸಿ.ಆರ್.ಬಿ. ಸಭೆಯಲ್ಲಿ ಹಾಗೂ ಕೆ.ಎಸ್.ಆರ್.ಟಿ.ಸಿ. ಘಟಕಗಳ ಮಾಸಿಕ ಸಭೆಯಲ್ಲಿ ತಂಬಾಕು ನಿಯಂತ್ರಣ ಕೋಶದ ಪ್ರತಿನಿಧಿಗಳು ಭಾಗವಹಿಸಿ ಕೋಟ್ಪಾ -2003ರ ಕುರಿತು ಮಾಹಿತಿ ನೀಡಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ. ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಇತರರು ಉಪಸ್ಥಿತರಿದ್ದರು