ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ವರದಿ ಪ್ರಚುರಪಡಿಸಿ: ಡಿಸಿ ಡಾ.ಆನಂದ ಕೆ.
District Disaster Management Committee Meeting
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ
ವಿಜಯಪುರ 08: ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಾಲೂಕಾ ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ 13 ತಾಲೂಕುಗಳಲ್ಲಿ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿದ್ದು, 21683.9 ಹೆಕ್ಟೇರ್ ಕೃಷಿ ಹಾಗೂ 450 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸಮೀಕ್ಷಾ ವರದಿಯನ್ನು ಜಿಲ್ಲೆಯ ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ಪಟ್ಟಿಯನ್ನು ಪ್ರಚುರಪಡಿಸಿ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ವರದಿಯನ್ನು ವಿಂಗಡಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲೆಯ 13 ತಾಲೂಕಿನ ತಹಶೀಲ್ದಾರಗಳು ಸರ್ಕಾರದ ನಿರ್ದೇಶನದಂತೆ ತಮ್ಮ ತಾಲೂಕಿನಲ್ಲಿ ಬೆಳ ಹಾನಿಯಾದ ರೈತ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧಡೆ ಪ್ರಚುರಪಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಎಲ್ಲ ತಹಶೀಲ್ದಾರಗಳು ಈಗಾಗಲೇ ಹಾನಿಯಾದ ಭಾಗಶ ಮನೆ, ಕಚ್ಚಾ ಮನೆಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಯನ್ನು ಸಮರ್ಕವಾಗಿ ಕೈಗೊಳ್ಳಬೇಕು. ಮಳೆ ಸೇರಿದಂತೆ ಪ್ರಾಕೃತಿಕ ವಿಕೋಪದಿಂದ ರಸ್ತೆಗಳ ಸಂಪರ್ಕ ಕಡಿಗೊಂಡಲ್ಲಿ ತಕ್ಷಣ ಸ್ಪಂದಿಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕಿನ ನೋಡಲ್ ಅಧಿಕಾರಿಗಳು ತಾಲೂಕಿನ ಸಮಗ್ರ ಮಾಹಿತಿ ಹೊಂದಿ, ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಂಚಿತವಾಗಿಯೇ ಸಭೆಗಳನ್ನು ನಡೆಸಿ, ಸೂಕ್ತ ತಿಳುವಳಿಕೆ ಮೂಡಿಸಬೇಕು. ಜಿಲ್ಲೆಯಾದ್ಯಂತ ವಿಫಲವಾಗಿರುವ ಕೊಳವೆ ಬಾವಿಗಳಿದ್ದಲ್ಲಿ ಕೂಡಲೇ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅನಾಹುತಕ್ಕೆ ಅವಕಾಶ ನೀಡದೇ ಸಮರ್ಕವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಪಂಚಾಯತ್ ರಾಜ್ ಇಂಜೀನೀಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ನ್ಯಾಮಗೊಂಡ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 