ಮತದಾರರ ಪಾರದರ್ಶಕ ಪಟ್ಟಿ ಸಿದ್ಧತೆಗೆ ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
District Electoral Officer Nagendra Prasad instructed to prepare a transparent list of voters
ಬಳ್ಳಾರಿ 11: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರೆ್ಡಗೊಳಿಸುವುದು, ತಪ್ಪುಗಳನ್ನು ತಿದ್ದುಪಡಿ ಮಾಡುವುದು ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಜಿಲ್ಲಾಡಳಿತದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ನಗರದ ಸರಳಾದೇವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ವಯಸ್ಸು ಮತ್ತು ಭಾವಚಿತ್ರಗಳಲ್ಲಿನ ದೋಷಗಳನ್ನು ಸರಿಪಡಿಸುವುದು. 18 ವರ್ಷ ತುಂಬಿದ ಯುವ ಮತದಾರರನ್ನು ಗುರುತಿಸಿ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರೆ್ಡ ಮಾಡುವುದು. ಮರಣ ಹೊಂದಿದ, ಕಾಯಂ ಆಗಿ ಬೇರೆಡೆಗೆ ವಲಸೆ ಹೋದ ಮತ್ತು ದ್ವಿಪ್ರತಿ ಹೊಂದಿರುವ ಮತದಾರರ ಹೆಸರುಗಳನ್ನು ನಿಯಮಾನುಸಾರ ಪಟ್ಟಿಯಿಂದ ತೆಗೆದುಹಾಕುವುದು ಎಸ್ಐಆರ್ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು.
ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ವಂಚಿತರಾಗಬಾರದು ಮತ್ತು ಮುಂಬರುವ ಚುನಾವಣೆಗಳನ್ನು ದೋಷಮುಕ್ತ ಮತದಾರರ ಪಟ್ಟಿಯೊಂದಿಗೆ ಎದುರಿಸಬೇಕು ಎಂಬ ಉದ್ದೇಶದಿಂದ ಈ ತರಬೇತಿ ಹಾಗೂ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದರು.
ಬಿ.ಎಲ್.ಓ.ಗಳು ಪ್ರತಿಯೊಂದು ಮನೆಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪರೀಶೀಲಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ವೋಟರ್ ಹೆಲ್ಪ್ಲೈನ್ ಆಪ್ ಮತ್ತು ಬಿ.ಎಲ್.ಓ ಆಪ್ಗಳನ್ನು ಸಮರ್ಕವಾಗಿ ಬಳಸಿಕೊಂಡು ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಎಂದರು.
ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಫಾರಂ 6-ಹೊಸ ಮತದಾರರ ನೋಂದಣಿಗಾಗಿ, ಫಾರಂ 7-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು/ಆಕ್ಷೇಪಣೆ ಸಲ್ಲಿಸಲು, ಫಾರಂ 8-ವಿಳಾಸ ಬದಲಾವಣೆ, ತಿದ್ದುಪಡಿ ಹಾಗೂ ಹೊಸ ಪಿವಿಸಿ ಕಾರ್ಡ್ಗಾಗಿ ಇರುವ ನಮೂನೆ ಅರ್ಜಿಗಳನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಾವುದೇ ಲೋಪದೋಷಗಳಿಲ್ಲದೆ, ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಅಗತ್ಯವಿರುವ ಪ್ರಮುಖ ಸೂಚನೆಗಳು ಮತ್ತು ತಾಂತ್ರಿಕ ವಿವರಗಳನ್ನು ತರಬೇತಿಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ಮತ್ತು ವ್ಯವಸ್ಥಿತವಾಗಿ ಕೈಗೊಳ್ಳಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ, ಅಗತ್ಯ ಮಾಹಿತಿ ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಆಗಿರುವ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಸಹಾಯಕ ಮತದಾರರ ನೋಂದಣಾಧಿಕಾರಿ ಆದ ತಹಶೀಲ್ದಾರರಾದ ಟಿ.ರೇಖಾ, ತಾಲೂಕು ಕಚೇರಿಯ ಎಲ್ಲಾ ಶಿರಸ್ತೇದಾರರು ಹಾಗೂ ಉಪ ತಹಶೀಲ್ದಾರರು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 