ಬಾಗಲಕೋಟೆ೨೪: ಮಾತೃಶ್ರೀ ಹಾಗೂ ಪಧಾನಮಂತ್ರಿ ಮಾತೃವಂದನಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ತರುವಲ್ಲಿ ಶ್ರಮಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅಭಿನಂದಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಹಾಲ್ನಲ್ಲಿ ವಿಡಿಯೋ ಕಾನ್ಪರೇನ್ಸ್ ಮೂಲಕ ನಡೆದ ಪ್ರಧಾನಮಂತ್ರಿ ಮಾತೃವಂದನಾ ಮತ್ತು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ 3 ತಿಂಗಳಿನಿಂದ ಈ ಎರಡು ಯೋಜನೆಗಳ ಅನುಷ್ಠಾನದಲ್ಲಿ ಬಾಗಲಕೋಟೆ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಜಿಲ್ಲೆಯಲ್ಲಿ ಮಾತೃಶ್ರೀ ಯೋಜನೆಯಡಿ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 6800 ಫಲಾನುಭವಿಗಳು ನೋಂದಣಿಯಾಗಿದ್ದು, ಶೇ.93 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ 2017-18 ರಿಂದ 2019-20 ನೇ ಸಾಲಿನವರೆಗೆ ಒಟ್ಟು 19,254 ಪಲಾನುಭವಿಗಳು ಇದರ ಪ್ರಯೋಜನ ಪಡೆಯುತ್ತಿದ್ದು, 8.25 ಕೋಟಿ ರೂ.ಗಳ ಸಹಾಯಧನ ನೀಡಲಾಗಿದೆ ಎಂದರು.
ಈ ಹಿನ್ನಲೆಯಲ್ಲಿ ಯೋಜನೆ ಅನುಷ್ಠಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ, ಮೇಲ್ವಿಚಾರಕರಿಗೆ, ಅಂಗನವಾಡಿ ಕಾರ್ಯಕತರ್ೆಯರು ಹಾಗು ಡಾಟಾ ಎಂಟ್ರಿ ಆಪರೇಟರಗಳಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರಿ ಉಪನಿದರ್ೇಶಕ ಎ.ಕೆ.ಬಸಣ್ಣವರ ಸೇರಿದಂತೆ ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಇಲಾಖೆಯ ಮುಖ್ಯ ಅಧೀಕ್ಷಕ ಎಂ.ಜಿ.ಪತ್ತಾರ, ವಿಷಯ ನಿವರ್ಾಹಕಿ ಎಸ್.ಎಸ್.ಮುರನಾಳ, ಭಾರತಿ ಕನಕಪ್ಪನವರು ಉಪಸ್ಥಿತರಿದ್ದರು.